ಪ್ರಶಾಂತ್ ಕಿಶೋರ್ ಅವರಿಗೆ 9.31 ಕೋಟಿ ರುಪಾಯಿ ಸಂಭಾವನೆ ನೀಡಿ, 2025ರ ಮುನ್ನೋಟ ಸಿದ್ಧಪಡಿಸುವ ಜವಾಬ್ದಾರಿ ನೀಡಲಾಗಿದೆ. ಆದರೆ ಪ್ರಶಾಂತ್ ಅವರು ಅತ್ತ ಉತ್ತರ ಪ್ರದೇಶ ಮತ್ತು ಪಂಜಾಬ್‌ನಲ್ಲಿ ಕಾಂಗ್ರೆಸ್‌ಗಾಗಿ ಚುನಾವಣಾ ರಣ ತಂತ್ರ ಹೆಣೆಯುವಲ್ಲಿ ನಿರತರಾಗಿದ್ದು, ಬಿಹಾರದಲ್ಲಿ ತಮ್ಮ ಕರ್ತವ್ಯಕ್ಕೆ ಅವರು ನ್ಯಾಯ ಸಲ್ಲಿಸುತ್ತಿಲ್ಲ ಎಂದು ಬಿಜೆಪಿ ನಾಯಕ ಸುಶೀಲ್ ಕುಮಾರ್ ಮೋದಿ ಅವರು ಆರೋಪಿಸಿದ್ದಾರೆ. ಅಲ್ಲದೆ ಮುಖ್ಯಮಂತ್ರಿಗಳ ಸಲಹೆಗಾರ ಹುದ್ದೆಯಿಂದಲೂ ಅವರನ್ನು ತೆಗೆಯಬೇಕು ಎಂದು ಆಗ್ರಹಿಸಿದ್ದಾರೆ.