ಹೈದರಾಬಾದ್: ಧಾರಾಕಾರ ಮಳೆಗೆ ಮನೆಗೋಡೆ ಕುಸಿತ, 7 ಮಂದಿ ದುರ್ಮರಣ

ಹೈದರಾಬಾದ್ ನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮವಾಗಿ ಮನೆಯ ಗೋಡೆ ಕುಸಿದು ಏಳು ಮಂದಿ ಸಾವನ್ನಪ್ಪಿದ್ದಾರೆ...
ಮಳೆಯಿಂದ ಜಲಾವೃತವಾಗಿರುವ ರಸ್ತೆಗಳು
ಮಳೆಯಿಂದ ಜಲಾವೃತವಾಗಿರುವ ರಸ್ತೆಗಳು
Updated on: 

ಹೈದರಾಬಾದ್: ಹೈದರಾಬಾದ್ ನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮವಾಗಿ ಮನೆಯ ಗೋಡೆ ಕುಸಿದು ಏಳು ಮಂದಿ ಸಾವನ್ನಪ್ಪಿದ್ದಾರೆ.

ಇಂದು ಬೆಳಗ್ಗೆಯಿಂದ ಎಡೆಬಿಡದೇ ಸುರಿಯತ್ತಿರುವ ಮಳೆಯಿಂದ ರಾಮನಾಥ ಪುರದಲ್ಲಿ ಮನೆ ಗೋಡೆ ಕುಸಿದು, ಮಹಿಳೆಯರು ಮತ್ತು ಮಕ್ಕಳು ಸಾವನ್ನಪ್ಪಿದ್ದು, ಇನ್ನೂ ಮೂರು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.

ಮುಂದಿನ ಎರಡು ಗಂಟೆಗಳಲ್ಲಿ ಇನ್ನೂ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದ್ದು ನಾಗರಿಕರು ಮನೆಯಿಂದ ಹೊರಬಾರದಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಇನ್ನು ಹಲವೆಡೆ ಮಳೆಯಿಂದಾಗಿ ಗೋಡೆ ಕುಸಿದು ಹಲವು ಮಂದಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಗಾಯಗೊಂಡಿರುವವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ಹಲವು ಮನೆಗಳು ಜಲಾವೃತಗೊಂಡಿವೆ. ಮಳೆಯಿಂದಾಗಿ ರಸ್ತೆಗಳು ನದಿಗಳಂತಾಗಿವೆ. ಹಲವು ವಾಹನಗಳು ನೀರಿನಲ್ಲಿ ಸಂಪೂರ್ಣ ಮುಳುಗಿ ಹೋಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com