ಪ್ರತ್ಯೇಕತಾವಾದಿ ಗಿಲಾನಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ
ಪ್ರತ್ಯೇಕತಾವಾದಿ ಗಿಲಾನಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ

ಪಾಕ್ ಪರ ನಿಂತ ಪ್ರತ್ಯೇಕತಾವಾದಿಗಳ ಸರ್ಕಾರಿ ಸೌಲಭ್ಯಕ್ಕೆ ಕತ್ತರಿ; ಕೇಂದ್ರ ಸರ್ಕಾರದ ಕಠಿಣ ನಿಲುವು

ಕಾಶ್ಮೀರ ವಿವಾದ ಕುರಿತಂತೆ ಪಾಕಿಸ್ತಾನದ ಪರವಾಗಿ ತಮ್ಮ ನಿಲುವನ್ನು ಪ್ರದರ್ಶಿಸುತ್ತಿರುವ ಕಾಶ್ಮೀರಿ ಪ್ರತ್ಯೇಕತಾವಾದಿಗಳ ವಿರುದ್ಧ ಮೋದಿ ಸರ್ಕಾರ ಕಠಿಣ ನಿಲುವು ತೆಗೆದುಕೊಳ್ಳುತ್ತಿದ್ದು, ಪ್ರತ್ಯೇಕತಾವಾದಿಗಳಿಗೆ ನೀಡುತ್ತಿರುವ ಸರ್ಕಾರಿ ಸೌಲಭ್ಯಗಳನ್ನು...
Published on

ಶ್ರೀನಗರ: ಕಾಶ್ಮೀರ ವಿವಾದ ಕುರಿತಂತೆ ಪಾಕಿಸ್ತಾನದ ಪರವಾಗಿ ತಮ್ಮ ನಿಲುವನ್ನು ಪ್ರದರ್ಶಿಸುತ್ತಿರುವ ಕಾಶ್ಮೀರಿ ಪ್ರತ್ಯೇಕತಾವಾದಿಗಳ ವಿರುದ್ಧ ಮೋದಿ ಸರ್ಕಾರ ಕಠಿಣ ನಿಲುವು ತೆಗೆದುಕೊಳ್ಳುತ್ತಿದ್ದು, ಪ್ರತ್ಯೇಕತಾವಾದಿಗಳಿಗೆ ನೀಡುತ್ತಿರುವ ಸರ್ಕಾರಿ ಸೌಲಭ್ಯಗಳನ್ನು ಶೀಘ್ರದಲ್ಲೇ ಸ್ಥಗಿತಗೊಳಿಸಲಿದೆ ಎಂದು ಗುರುವಾರ ತಿಳಿದುಬಂದಿದೆ.

ಈ ಕುರಿತಂತೆ ಖಾಸಗಿ ಮಾಧ್ಯಮವೊಂದು ವರದಿ ಮಾಡಿದ್ದು, ಪಾಕ್ ಪರ ತಮ್ಮ ನಿಲುವನ್ನು ಪ್ರದರ್ಶಿಸುತ್ತಿರುವ ಸೈಯದ್ ಅಲಿ ಗಿಲಾನಿ, ಮಿರ್ವೈಜ್ ಫರೂಕ್ ಮತ್ತು ಯಾಸಿನ್ ಮಲಿಕ್ ರಂತಹ ಪ್ರತ್ಯೇಕತಾವಾದಿಗಳ ವಿರುದ್ಧ ಕೇಂದ್ರದ ಎನ್ ಡಿಎ ಸರ್ಕಾರ ಕಠಿಣ ನಿಲುವನ್ನು ತೆಗೆದುಕೊಳ್ಳುತ್ತಿದ್ದು, ಪ್ರತ್ಯೇಕತಾವಾದಿಗಳಿಗೆ ನೀಡುತ್ತಿರುವ ಸರ್ಕಾರಿ ಸೌಲಭ್ಯಗಳಾದ ವಿದೇಶ ಪ್ರಯಾಣ ವ್ಯವಸ್ಥೆ, ವಿಮಾನಯಾನ ಟಿಕೆಟ್, ಹೋಟೆಲ್ ಸೇವೆ, ಭದ್ರತೆ ಹಾಗೂ ವಾಹನ ಸೇವೆಯನ್ನು ಸ್ಥಗಿತಗೊಳಿಸಲು ತೀರ್ಮಾನಿಸಿದೆ ಎಂದು ಹೇಳಿಕೊಂಡಿದೆ.

ನಿರ್ಧಾರ ಕುರಿತಂತೆ ಕೇಂದ್ರದ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಈಗಾಗಲೇ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರೊಂದಿಗೆ ಮಾತುಕತೆ ನಡೆಸಿದ್ದು, ಪ್ರತ್ಯೇಕತಾವಾದಿಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಸೌಲಭ್ಯಕ್ಕೂ ಕಡಿವಾಣ ಹಾಕುವಂತೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.

ಪ್ರತ್ಯೇಕತಾವಾದಿಗಳಿಗಾಗಿ ಸರ್ಕಾರ ವರ್ಷಕ್ಕೆ ರು. 100 ಕೋಟಿ ಹಣವನ್ನು ಖರ್ಚು ಮಾಡುತ್ತಿದ್ದು, ಇದರಲ್ಲಿ ಕೇಂದ್ರ ಸರ್ಕಾರ ಶೇ.90 ರಷ್ಟು ಹಾಗೂ ರಾಜ್ಯ ಸರ್ಕಾರ ಶೇ. 10 ರಷ್ಟು ಹಣದ ಹೊರೆಯನ್ನು ಹೊತ್ತು ವ್ಯಯ ಮಾಡುತ್ತಿದೆ. ಪ್ರತ್ಯೇಕತಾವಾದಿಗಳ ಭದ್ರತೆಗಾಗಿಯೇ ಸರ್ಕಾರಿ 950 ಪೊಲೀಸರನ್ನು ನಿಯೋಜಿಸಿದ್ದು, ಪ್ರತೀ ನಿತ್ಯ ಪ್ರತ್ಯೇಕತಾವಾದಿಗಳ ಭದ್ರತೆಗೇ ಸರ್ಕಾರ ಹೆಚ್ಚು ಹಣವನ್ನು ಖರ್ಚು ಮಾಡುತ್ತಿದೆ.

ಉಗ್ರ ಬುರ್ಹಾನ್ ವಾನಿ ಹತ್ಯೆ ಹಿನ್ನೆಲೆಯಲ್ಲಿ ಕಾಶ್ಮೀರದ ಪ್ರತ್ಯೇಕವಾದಿಗಳು ನೀಡಿದ್ದ ಪ್ರತಿಭಟನಾ ಕರೆ ಹಿನ್ನೆಲೆಯಲ್ಲಿ ಕಳೆದ 55 ದಿನಗಳಿಂದಲೂ ಕಾಶ್ಮೀರದಲ್ಲಿ ಹಿಂಸಾಚಾರ ಮುಗಿಲು ಮುಟ್ಟಿತ್ತು. ಹಿಂಸಾಚಾರದಲ್ಲಿ ಒಟ್ಟಾರೆ ಇಬ್ಬರು ಪೊಲೀಸರು ಸೇರಿದಂತೆ 72 ಜನರು ಸಾವನ್ನಪ್ಪಿದ್ದರು, ಅಲ್ಲದೆ, 11 ಸಾವಿರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

ಈ ಹಿನ್ನೆಲೆಯಲ್ಲಿ ಪ್ರತ್ಯೇಕತಾವಾದಿಗಳ ವಿರುದ್ಧ ಕಠಿಣ ನಿಲುವು ತೆಗೆದುಕೊಳ್ಳಲು ನಿರ್ಧರಿಸಿರುವ ಮೋದಿ ಸರ್ಕಾರ, ಭದ್ರತೆ ಸೇರಿದಂತೆ ಸರ್ಕಾರ ನೀಡುತ್ತಿರುವ ಹಲವು ಸೌಲಭ್ಯಗಳನ್ನು ಹಿಂಪಡೆಯಲು ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com