"ಹೋರಾಟವನ್ನು ಬಿಡಬೇಡಿ ಇಡೀ ರಾಷ್ಟವೇ ನಿಮ್ಮೊಂದಿಗೆ ಇದೆ" ಎಂದು ದೆಹಲಿ ಸಿಎಂ ಆಮ್ ಆದ್ಮಿ ಪಕ್ಷದ ನಾಯಕ ಕೇಜ್ರಿವಾಲ್ ಟ್ವೀಟ್ ಮಾಡಿದ್ದು , ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಸರ್ಕಾರ ಪಶ್ಚಿಮ ಬಂಗಾಳದ ಎರಡು ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ ಸೇನೆಯನ್ನು ನಿಯೋಜಿಸಿದ ಕ್ರಮವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರಕ್ಕೆ ಮಾಹಿತಿಯೇ ನೀಡದೇ ಕೇಂದ್ರ ಸರ್ಕಾರ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ ಸೇನೆಯನ್ನು ನಿಯೋಜಿಸಿದೆ ಎಂದು ಆರೋಪಿಸಿದ್ದಾರೆ.