ಜಮ್ಮು: ಪಾಕಿಸ್ತಾನ ಶುಕ್ರವಾರ ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು, ಜಮ್ಮು ಮತ್ತು ಕಾಶ್ಮೀರದ ರಾಜೋರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕ್ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಓರ್ವ ಬಿಎಸ್ಎಫ್ ಯೋಧ ಗಾಯಗೊಂಡಿದ್ದಾರೆ.
ರಾಜೋರಿ ಜಿಲ್ಲೆಯ ಭಿಂಭೇರ್ ಗಾಲಿ ಸೆಕ್ಟರ್ ನಲ್ಲಿ ಇಂದು ಬೆಳಗ್ಗೆ 10 ಗಂಟೆಯ ಸುಮಾರಿಗೆ ಪಾಕ್ ಸೇನೆ ನಡೆಸಿದ ಒಂದು ಸುತ್ತಿನ ಗುಂಡಿನ ದಾಳಿಯಲ್ಲಿ ಬಿಎಸ್ ಎಫ್ ಪೇದೆ ಗಾಯಗೊಂಡಿದ್ದಾರೆ ಎಂದು ಬಿಎಸ್ಎಫ್ ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗಾಯಗೊಂಡ ಯೋಧನ ಸ್ಥಿತಿ ಸ್ಥಿರವಾಗಿದೆ ಎಂದು ಅವರು ಹೇಳಿದ್ದಾರೆ.
ನವೆಂಬರ್ 23ರಂದು ನೌಶೆರ್ ಮತ್ತು ಮಂಜಕೋಟೆ ಹಾಗೂ ಬಾಲಕೋಟೆ ಸೆಕ್ಟರ್ ನಲ್ಲಿ ಪಾಕ್ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಆರು ಯೋಧರು ಸೇರಿದಂತೆ ಒಟ್ಟು 11 ಮಂದಿ ಗಾಯಗೊಂಡಿದ್ದರು.