ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ: ಶಾಲೆಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಆರಂಭವಾಗಿದ್ದು, ಶಾಲೆಗಳಿಗೆ ಬೆಂಕಿ ಹಚ್ಚುವ ಮೂಲಕ ದುಷ್ಕರ್ಮಿಗಳು ಅಟ್ಟಹಾಸ ಮರೆದಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಆರಂಭವಾಗಿದ್ದು, ಶಾಲೆಗಳಿಗೆ ಬೆಂಕಿ ಹಚ್ಚುವ ಮೂಲಕ ದುಷ್ಕರ್ಮಿಗಳು ಅಟ್ಟಹಾಸ ಮರೆದಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ದಕ್ಷಿಣ ಕಾಶ್ಮೀರದಲ್ಲಿರುವ ಅನಂತನಾಗ್ ಜಿಲ್ಲೆಯ ಸರ್ಕಾರಿ ಶಾಲೆಯೊಂದಕ್ಕೆ ಕಳೆದ ರಾತ್ರಿ ಬೆಂಕಿ ಹಚ್ಚಿರುವ ದುಷ್ಕರ್ಮಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ. ಇದೀಗ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ, ಪ್ರಸ್ತುತ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಜುಲೈ 8 ರಂದು ಹಿಜ್ಜುಲ್ ಉಗ್ರ ಸಂಘಟನೆ ಕಮಾಂಡರ್ ಬುರ್ಹಾನ್ ವಾನಿಯನ್ನು ಭದ್ರತಾ ಸಿಬ್ಬಂದಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಕಾಶ್ಮೀರದಾದ್ಯಂತ ಹಿಂಸಾಚಾರ ಭುಗಿಲೆದ್ದಿತ್ತು. ಈ ಹಿಂಸಾಚಾರ ಮುಂದುವರೆಯುತ್ತಲೇ ಬಂದಿದ್ದು, ಈಗಲೂ ಶ್ರೀನಗರದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಕಾಶ್ಮೀರದಲ್ಲಿ ನಡೆದ ಹಿಂಸಾಚಾರದಲ್ಲಿ ಈ ವರೆಗೂ 12 ಸಾವಿರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ,

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com