ಮಹಾರಾಷ್ಟ್ರ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಬು ಅಜ್ಮಿ
ಮಹಾರಾಷ್ಟ್ರ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಬು ಅಜ್ಮಿ

ಕಾಶ್ಮೀರದಲ್ಲಿ ನಿರ್ಮಾಣವಾಗಿರುವ ಅಶಾಂತಿಗೆ ಪಾಕಿಸ್ತಾನವೇ ನೇರಹೊಣೆ: ಅಬು ಅಜ್ಮಿ

ಕಾಶ್ಮೀರದಲ್ಲಿ ಹಿಂಸಾಚಾರ ಸೃಷ್ಟಿಯಾಗಲು ಹಾಗೂ ಕಾಶ್ಮೀರದಲ್ಲಿ ಸೃಷ್ಟಿಯಾಗಿರುವ ಅಶಾಂತಿಗೆ ಪಾಕಿಸ್ತಾನವೇ ನೇರಹೊಣೆಯಾಗಿದೆ ಎಂದು ಸಮಾಜವಾದಿ ಪಕ್ಷದ ನಾಯಕ ಅಬು ಅಜ್ಮಿ...

ಮುಂಬೈ: ಕಾಶ್ಮೀರದಲ್ಲಿ ಹಿಂಸಾಚಾರ ಸೃಷ್ಟಿಯಾಗಲು ಹಾಗೂ ಕಾಶ್ಮೀರದಲ್ಲಿ ಸೃಷ್ಟಿಯಾಗಿರುವ ಅಶಾಂತಿಗೆ ಪಾಕಿಸ್ತಾನವೇ ನೇರಹೊಣೆಯಾಗಿದೆ ಎಂದು ಸಮಾಜವಾದಿ ಪಕ್ಷದ ನಾಯಕ ಅಬು ಅಜ್ಮಿ ಅವರು ಹೇಳಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಹೇಳಿಕೆ ನೀಡಿದ್ದ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು, ಕಾಶ್ಮೀರದಲ್ಲಿ ನಿರ್ಮಾಣವಾಗಿರುವ ಹಿಂಸಾಚಾರ ಹಾಗೂ ಅಶಾಂತಿಗೆ ಪಾಕಿಸ್ತಾನವನ್ನು ದೂಷಿಸಬಾರದು ಎಂದು ಹೇಳಿದ್ದರು.

ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಮಹಾರಾಷ್ಟ್ರ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಬು ಅಜ್ಮಿ ಅವರು, ದೇಶದಲ್ಲಿ ಪಾಕಿಸ್ತಾನ ಈ ಹಿಂದಿನಿಂದಲೂ ಭಯೋತ್ಪಾದನೆಯನ್ನು ಪ್ರಾಯೋಜಿಸುತ್ತಲೇ ಬಂದಿದೆ. ಪಾಕಿಸ್ತಾನ ಗಡಿಯಲ್ಲಿ ಓಡಾಡುವ ಜನರು ಕಾಶ್ಮೀರದ ಯುವಕರಿಗೆ ಪ್ರಚೋದನೆಯನ್ನು ನೀಡುತ್ತಿದ್ದು, ಇದರಿಂದ ಕಾಶ್ಮೀರದಲ್ಲಿ ಹಿಂಸಾಚಾರ ಸೃಷ್ಟಿಯಾಗುತ್ತಿದೆ ಎಂದು ಹೇಳಿದ್ದಾರೆ.

ಕಾಶ್ಮೀರದಲ್ಲಿ ಶಾಂತಿ ಹದಗೆಟ್ಟಿರುವುದಕ್ಕಿ ಪಾಕಿಸ್ತಾನ ರಾಷ್ಟ್ರವೇ ನೇರಹೊಣೆಯಾಗಿದೆ. ಕಾಶ್ಮೀರದಲ್ಲಿರುವ ಮುಸ್ಲಿಮರಿಗೂ ನ್ಯಾಯ ದೊರಕಿಸಿಕೊಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಸ್ವಾತಂತ್ರ್ಯದ ದಿನದಂದು ಮಾಡಿಕೊಂಡ ಒಪ್ಪಂದಂತೆ ಭಾರತ ಮತ್ತು ಪಾಕಿಸ್ತಾನ ಸರ್ಕಾರಗಳು ನಡೆಯಬೇಕಿದೆ. ಹಾಗೂ ಕಾಶ್ಮೀರಿಗಳಿಗೆ ಅವರ ಹಕ್ಕನ್ನು ನೀಡಬೇಕಿದೆ ಎಂದು ಸಲಹೆ ನೀಡಿದ್ದಾರೆ.

ಉಭಯ ರಾಷ್ಟ್ರಗಳು ಯಾವುದೇ ಕಾರಣಕ್ಕೂ ಕೆಟ್ಟ ನಿರ್ಧಾರನಗಳನ್ನು ತೆಗೆದುಕೊಳ್ಳಬಾರದು. ಒಂದು ನಿರ್ಧಾರದಿಂದ ರಾಷ್ಟ್ರಗಳ ಮೇಲೆ ಋಣಾತ್ಮಕ ಪರಿಣಾಮ ಬೀರಲಿದೆ. ಕಾಶ್ಮೀರಿಗಳ ಮೇಲೆ ಸರ್ಕಾರ ಮೃದುಧೋರಣೆ ತೋರಬೇಕಿದೆ. ಇದರಿಂದ ಧೀರ್ಘಕಾಲದಿಂದಲೂ ಇರುವ ಸಮಸ್ಯೆಗಳು ಬಗೆಹರಿಯಲಿದೆ ಎಂದು ತಿಳಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com