ಉತ್ತರ ಪ್ರದೇಶ ಚುನಾವಣೆಯಲ್ಲಿ ಎಸ್ಪಿ ಜೊತೆ ಮೈತ್ರಿ ತಳ್ಳಿಹಾಕಿದ ಕಾಂಗ್ರೆಸ್

ಇತ್ತೀಚಿಗಷ್ಟೇ ಸಮಾಜವಾದಿ ಪಕ್ಷದ ನಾಯಕ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಮುಂದಿನ...
ರಾಜ್ ಬಬ್ಬರ್
ರಾಜ್ ಬಬ್ಬರ್
ಲಖನೌ: ಇತ್ತೀಚಿಗಷ್ಟೇ ಸಮಾಜವಾದಿ ಪಕ್ಷದ ನಾಯಕ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಮುಂದಿನ ವರ್ಷ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ 'ಕೈ'ಹಿಡಿಯಲು ಸಿದ್ಧ ಎಂದಿದ್ದರು. ಆದರೆ ಎಸ್ಪಿ ಜೊತೆಗಿನ ಮೈತ್ರಿ ಮಾತುಕತೆಯನ್ನು ಕಾಂಗ್ರೆಸ್ ಸ್ಪಷ್ಟವಾಗಿ ತಳ್ಳಿಹಾಕಿದೆ.
ಮೈತ್ರಿ ಬಗ್ಗೆ ಸೋಮವಾರ ಮಾಧ್ಯಮಕ್ಕಿ ಪ್ರತಿಕ್ರಿಯಿಸಿರುವ ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ರಾಜ್ ಬಬ್ಬರ್ ಅವರು, ತಮ್ಮ ಪಕ್ಷ ವಿಧಾನಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಮತ್ತು ಮೈತ್ರಿ ಕುರಿತ ಮಾತುಕತೆ ಕೇವಲ ಕಾಲ್ಪನಿಕ ಎಂದಿದ್ದಾರೆ.
ನಮ್ಮ ಕಾರ್ಯಕರ್ತರ ಸ್ಥೈರ್ಯಗೆಡಿಸಲು ಮೈತ್ರಿ ಬಗ್ಗೆ ಮಾತನಾಡಲಾಗುತ್ತಿದೆ. ಅಂತಹ ಯಾವುದೇ ಮಾಹಿತಿ ನನಗೆ ಬಂದಿಲ್ಲ. ನಮ್ಮ ನಾಯಕರೂ ಸಹ ಇದುವರೆಗೆ ಮೈತ್ರಿ ಬಗ್ಗೆ ಮಾತನಾಡಲು ಅಥವಾ ಎಸ್ಪಿಯ ಪ್ರಸ್ತಾವನೆಯನ್ನು ಪರಿಗಣಿಸುವಂತೆ ಯಾವುದೇ ಸೂಚನೆ ನೀಡಿಲ್ಲ. ಇದು ಸಂಪೂರ್ಣ ಕಲ್ಪಿತ ಎಂದು ಬಬ್ಬರ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಇತ್ತೀಚಿಗಷ್ಟೇ ಅಖಿಲೇಶ್ ಯಾದವ್ ಅವರು ನಮ್ಮ ಪಕ್ಷಕ್ಕೆ ಬಹುಮತಕ್ಕೆ ಬೇಕಾಗುವಷ್ಟು ಸಂಖ್ಯೆ ಪಡೆಯುವ ಸಾಮರ್ಥ್ಯ ಇದೆ. ಆದರೆ ಒಂದು ವೇಳೆ ಕಾಂಗ್ರೆಸ್ ಜೊತೆ ಕೈಜೋಡಿಸಿದೆ 300ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಬಹುದು ಎಂದು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com