ಜಯಲಲಿತಾ ಅಕಾಲಿಕ ಮರಣ ಅತೀವ ನೋವು ತಂದಿದೆ; ಪ್ರಧಾನಿ ಮೋದಿ ಸಂತಾಪ

ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ನಿಧನ ಹೊಂದಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ತೀವ್ರ ಸಂತಾಪವನ್ನು ಸೂಚಿಸಿದ್ದಾರೆ...
ಜಯಲಲಿತಾ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
ಜಯಲಲಿತಾ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
Updated on: 

ನವದೆಹಲಿ: ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ನಿಧನ ಹೊಂದಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ತೀವ್ರ ಸಂತಾಪವನ್ನು ಸೂಚಿಸಿದ್ದಾರೆ.

ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಜಯಲಲಿತಾ ಅವರ ಅಕಾಲಿಕ ಮರಣ ತೀವ್ರ ನೋವನ್ನು ತಂದಿದೆ. ಅವರ ಅಗಲಿಕೆ ಭಾರತೀಯ ರಾಜಕೀಯಕ್ಕೆ ತುಂಬಲಾರದ ನಷ್ಟ ಎಂದು ಹೇಳಿದ್ದಾರೆ.

ಜನರೊಂದಿಗೆ ಜಯಲಲಿತಾ ಅವರ ಸಂಪರ್ಕ ಅವಿನಾಭಾವವಾಗಿತ್ತು. ಬಡ ಜನರ ಪರವಾಗಿ ಸಾಕಷ್ಟು ಕೆಲಸಗಳನ್ನು ಮಾಡಿದ್ದರು. ಮಹಿಳೆಯರಿಗೆ ಜಯಲಲಿತಾ ಅವರು ಎಂದಿಗೂ ಸ್ಫೂರ್ತಿದಾಯಕ ವ್ಯಕ್ತಿಯಾಗಿದ್ದಾರೆಂದು ತಿಳಿಸಿದ್ದಾರೆ.

ಮೂಲಗಳ ಪ್ರಕಾರ ಜಯಲಲಿತಾ ಅವರ ಅಕಾಲಿಕ ನಿಧನ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆಂದು ಹೇಳಲಾಗುತ್ತಿದ್ದು, ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಪಡೆಯಲಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com