
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾರ ಅಂತಿಮ ದರ್ಶನ ಪಡೆಯಲು ಆಗಮಿಸುತ್ತಿದ್ದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ.
ಐಎಎಫ್ ವಿಮಾನದಲ್ಲಿ ರಾಷ್ಟ್ರಪತಿಗಳು ಪ್ರಣಬ್ ಮುಖರ್ಜಿ ಅವರು ನವದೆಹಲಿಯಿಂದ ಚೆನ್ನೈಗೆ ಹೊರಟಿದ್ದರು. ಈ ವೇಳೆ ವಿಮಾನದಲ್ಲಿ ಏಕಾಏಕಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು ಕೂಡಲೇ ವಿಮಾನ ದೆಹಲಿಗೆ ವಾಪಸ್ ಆಗಿದೆ.
ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಯಲಲಿತಾ ಅವರು ನಿನ್ನೆ ರಾತ್ರಿ 11.15ರ ಸುಮಾರಿಗೆ ಇಹಲೋಕ ತ್ಯಜಿಸಿದರು.
Advertisement