ಡಾ.ಅಂಬೇಡ್ಕರ್ ಅವರಿಗೆ ಭಾರತ ಎಂದಿಗೂ ಕೃತಜ್ಞವಾಗಿರುತ್ತದೆ: ಪ್ರಧಾನಿ ಮೋದಿ

ಭಾರತ ಸಂವಿಧಾನದ ಪಿತಾಮಹ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ 60ನೇ ವರ್ಷದ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ಮುಂಬೈ: ಭಾರತ ಸಂವಿಧಾನದ ಪಿತಾಮಹ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ 60ನೇ ವರ್ಷದ ಮಹಾಪರಿನಿರ್ವಾಣ ದಿನವಾದ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದರು.
ಅಂಬೇಡ್ಕರ್ ಅವರ ಪುಣ್ಯತಿಥಿ ಅಂಗವಾಗಿ ಸಂಸತ್ತು ಆವರಣದಲ್ಲಿ ವಿಶೇಷ ಕಾರ್ಯಕ್ರಮವನ್ನು ನಡೆಸಲಾಗಿತ್ತು. ಅದರಲ್ಲಿ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ, ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮೊದಲಾದವರು ಭಾಗವಹಿಸಿದ್ದರು.
ಅಂಬೇಡ್ಕರ್ ಅವರ ದೇಹವನ್ನು ಸಮಾಧಿ ಮಾಡಿದ ಸ್ಥಳವಾದ ಚೈತ್ಯಭೂಮಿಯಲ್ಲಿ ವಿಶೇಷ ಕಾರ್ಯಕ್ರಮವನ್ನು ಇಂದು ಏರ್ಪಡಿಸಲಾಗಿದ್ದು ಲಕ್ಷಾಂತರ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಬೃಹತ್ ಮುಂಬೈ ಮಹಾನಗರ ಪಾಲಿಕೆ ಸಕಲ ವ್ಯವಸ್ಥೆಗಳನ್ನು ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com