ವಾರಾಂತ್ಯಕ್ಕೆ ಸುಷ್ಮಾ ಸ್ವರಾಜ್ ಗೆ ಕಿಡ್ನಿ ಕಸಿ ಸಾಧ್ಯತೆ

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ವಾರಾಂತ್ಯದ ವೇಳೆಗೆ ಕಿಡ್ನಿ ಜೋಡಣೆ (ಕಿಡ್ನಿ ಕಸಿ) ಶಸ್ತ್ರಚಿಕಿತ್ಸೆ ನಡೆಯುವ ಸಾಧ್ಯತೆ ಇದೆ.
ಸುಷ್ಮಾ ಸ್ವರಾಜ್
ಸುಷ್ಮಾ ಸ್ವರಾಜ್
ನವದೆಹಲಿ: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ವಾರಾಂತ್ಯದ ವೇಳೆಗೆ ಕಿಡ್ನಿ ಜೋಡಣೆ (ಕಿಡ್ನಿ ಕಸಿ) ಶಸ್ತ್ರಚಿಕಿತ್ಸೆ ನಡೆಯುವ ಸಾಧ್ಯತೆ ಇದೆ. 
ಸುಷ್ಮಾ ಸ್ವರಾಜ್ ಅವರ ಕುಟುಂಬದ ಸದಸ್ಯರ ಕಿಡ್ನಿ ಹೊಂದಾಣಿಕೆಯಾಗದ ಹಿನ್ನೆಲೆಯಲ್ಲಿ ಜೀವಂತವಿರುವ ವ್ಯಕ್ತಿಯೊಬ್ಬರು ಕಿಡ್ನಿ ನೀಡಲು ಮುಂದಾಗಿದ್ದು ವಾರಾಂತ್ಯಕ್ಕೆ ಶಸ್ತ್ರಚಿಕಿತ್ಸೆ ನಡೆಯಲಿದೆ ಎಂಬ ಬಗ್ಗೆ ವರದಿಗಳು ಪ್ರಕಟವಾಗಿದೆ. ಕಿಡ್ನಿ ದಾನ ಮಾಡುತ್ತಿರುವವರು ಹಾಗೂ ಸುಷ್ಮಾ ಸ್ವರಾಜ್ ಅವರ ಕಿಡ್ನಿ ಹೊಂದಾಣಿಕೆ ತಪಾಸಣೆ ಸಂಪೂರ್ಣಗೊಂಡಿದ್ದು ಏಮ್ಸ್ ನ ತಜ್ಞರು ಶಸ್ತ್ರ ಚಿಕಿತ್ಸೆ ನಡೆಸಲಿದ್ದಾರೆ. 
ನ.16 ರಿಂದ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುಷ್ಮಾ ಸ್ವರಾಜ್ ಅವರು ದೀರ್ಘಾವಧಿ ಮಧುಮೇಹದಿಂದ ಬಳಲುತ್ತಿದ್ದು, ಕಿಡ್ನಿ ವೈಫಲ್ಯದ ಹಿನ್ನೆಲೆಯಲ್ಲಿ ವಾರಕ್ಕೆ ಮೂರು ಬಾರಿ ಡಯಾಲಿಸಿಸ್ ನಡೆಸಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com