ಪ್ರಧಾನಿ ಮೋದಿ ಲೋಕಸಭೆ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಜಾ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಾರಣಾಸಿಯಿಂದ ಲೋಕಸಭೆಗೆ ಆಯ್ಕೆಯಾಗಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯೊಂದನ್ನು ಅಲಹಾಬಾದ್ ಹೈಕೋರ್ಟ್ ಬುಧವಾರ...
ಪ್ರಧಾನಮಂತ್ರಿ ನರೇಂದ್ರ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ
Updated on: 

ಅಲಹಾಬಾದ್: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಾರಣಾಸಿಯಿಂದ ಲೋಕಸಭೆಗೆ ಆಯ್ಕೆಯಾಗಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯೊಂದನ್ನು ಅಲಹಾಬಾದ್ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.

2014ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಎದುರು ಸ್ಪರ್ಧಿಸಿ ಸೋಲು ಕಂಡಿದ್ದ ಕಾಂಗ್ರೆಸ್ ನ ಅಜಯ್ ರಾಯ್ ಅವರು ಮೋದಿಯವರ ಆಯ್ಕೆ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಅರ್ಜಿಯೊಂದನ್ನು ಸಲ್ಲಿಸಿದ್ದರು.

ಈ ಅರ್ಜಿಯನ್ನು ಇಂದು ಪರಿಶೀಲನೆ ನಡೆಸಿರುವ ಅಲಹಾಬಾದ್ ಹೈಕೋರ್ಟ್ ನ ನ್ಯಾಯಮೂರ್ತಿ ವಿಕ್ರಮ್ ನಾಥ್ ಅವರಿದ್ದ ಏಕಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ

ಪ್ರಧಾನಿ ಮೋದಿ ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ಸ್ಪಷ್ಟವಾಗಿಲ್ಲ. ಮೋದಿಯವರು ಚುನಾವಣಾ ಪ್ರಚಾರಕ್ಕೆ ನಿಗದಿಪಡಿಸಿದ ಮೊತ್ತಕ್ಕಿಂತಲೂ ಹೆಚ್ಚು ಹಣವನ್ನು ಬಳಕೆ ಮಾಡಿದ್ದಾರೆಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಆದರೆ, ಇದಕ್ಕೆ ಸಂಬಂಧಿಸಿದಂತೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಿಲ್ಲ. ಹೀಗಾಗಿ ಅರ್ಜಿಯನ್ನು ವಜಾಗೊಳಿಸಿ ನ್ಯಾಯಮೂರ್ತಿ ಆದೇಶ ಹೊರಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com