ಬಿಜೆಪಿ, ಕಾಂಗ್ರೆಸ್ ಪಕ್ಷಗಳ ನೋಂದಣಿ ರದ್ದತಿಗೆ ಮಾಜಿ ಅಧಿಕಾರಿಯ ಆಗ್ರಹ
ರಾಷ್ಟ್ರೀಯ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ವಿರುದ್ಧ ಮಾಜಿ ಅಧಿಕಾರಿ ಇಎಎಸ್ ಶರ್ಮಾ ವಿದೇಶೀ ದೇಣಿಗೆ ಕಾಯ್ದೆ(ಎಫ್ ಸಿ ಆರ್ ಎ)ಯನ್ನು ಉಲ್ಲಂಘನೆ ಮಾಡಿರುವ ಆರೋಪ ಹೊರಿಸಿದ್ದಾರೆ.
ಬಿಜೆಪಿ, ಕಾಂಗ್ರೆಸ್ ನೋಂದಣಿ ರದ್ದತಿಗೆ ಮಾಜಿ ಅಧಿಕಾರಿಯ ಆಗ್ರಹ
ವಿಶಾಖಪಟ್ಟಣ: ರಾಷ್ಟ್ರೀಯ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ವಿರುದ್ಧ ಮಾಜಿ ಅಧಿಕಾರಿ ಇಎಎಸ್ ಶರ್ಮಾ ವಿದೇಶೀ ದೇಣಿಗೆ ಕಾಯ್ದೆ(ಎಫ್ ಸಿ ಆರ್ ಎ)ಯನ್ನು ಉಲ್ಲಂಘನೆ ಮಾಡಿರುವ ಆರೋಪ ಹೊರಿಸಿದ್ದು, ಪಕ್ಷಗಳ ನೋಂದಣಿಯನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿದ್ದಾರೆ.
ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವ ಶರ್ಮಾ, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಎಫ್ ಸಿ ಆರ್ ಎ ಕಾಯ್ದೆಯನ್ನು ಉಲ್ಲಂಘನೆ ಮಾಡಿದ್ದು ತಕ್ಷಣವೇ ಕ್ರಮ ಕೈಗೊಳ್ಳಬೇಕು ಇಲ್ಲದೇ ಇದ್ದಲ್ಲಿ ನ್ಯಾಯಾಂಗದ ಮೊರೆ ಹೋಗುವುದಾಗಿ ಎಚ್ಚರಿಸಿದ್ದಾರೆ.
ವಿದೇಶಿ ಮೂಲಗಳಿಂದ ದೇಣಿಗೆ ಸ್ವೀಕರಿಸುವ ವಿಷಯದಲ್ಲಿ ನಿಯಮಗಳನ್ನು ಉಲ್ಲಂಘನೆ ಮಾಡಿರುವ ಬಿಜೆಪಿ ಹಾಗೂ ಕಾಂಗ್ರೆಸ್ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆಯ 29 ಬಿ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ಮಾಜಿ ಐಎಎಸ್ ಅಧಿಕಾರಿ ಇಎಎಸ್ ಶರ್ಮಾ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ್ದಾರೆ.