ನಾಗಪುರ: 500 ಹಾಗೂ 1.000 ರು ನೋಟು ನಿಷೇಧ ಮಾಡಿರುವ ಕೇಂದ್ರ ಸರ್ಕಾರ ಕೂಡಲೇ 200 ರು ನೋಟು ಮುಂದ್ರಿಸಬೇಕು ಎಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ಹೇಳಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಮೋದಿ ಸರ್ಕಾರದ ನಿಷೇಧದಿಂದಾಗಿ, ವ್ಯಾಪಾರಿಗಳು, ಸಾಮಾನ್ಯ ವ್ಯಕ್ತಿ, ರೈತರು ಹಾಗೂ ಗ್ರಾಮೀಣ ಪ್ರದೇಶದ ಜನತೆ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಉತ್ತರ ಪ್ರದೇಶ ಮತ್ತು ಪಂಜಾಬ್ ವಿಧಾನಸಭೆ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ನೋಟು ನಿಷೇಧ ಮಾಡಲಾಯಿತು ಎಂದು ಚವಾಣ್ ದೂರಿದ್ದಾರೆ.
Advertisement