ತ್ರಿವಳಿ ತಲಾಕ್ ಅಸಂವಿಧಾನಿಕ, ಮುಸ್ಲಿಂ ಮಹಿಳೆಯರ ಹಕ್ಕು ಉಲ್ಲಂಘನೆ: ಅಲಹಾಬಾದ್ ಹೈಕೋರ್ಟ್
ತ್ರಿವಳಿ ತಲಾಕ್ ಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ತ್ರಿವಳಿ ತಲಾಕ್ ಅಸಂವಿಧಾನಿಕವಾಗಿದ್ದು, ತಲಾಕ್ ನಿಂದಾಗಿ ಮುಸ್ಲಿಂ ಮಹಿಳೆಯರ ಹಕ್ಕು...
ತ್ರಿವಳಿ ತಲಾಕ್ ಅಸಾಂವಿಧಾನಿಕ, ಮುಸ್ಲಿಮ್ ಮಹಿಳೆಯರ ಹಕ್ಕು ಉಲ್ಲಂಘನೆ: ಅಲಹಾಬಾದ್ ಹೈಕೋರ್ಟ್
ಅಲಹಾಬಾದ್: ತ್ರಿವಳಿ ತಲಾಕ್ ಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ತ್ರಿವಳಿ ತಲಾಕ್ ಅಸಂವಿಧಾನಿಕವಾಗಿದ್ದು, ತಲಾಕ್ ನಿಂದಾಗಿ ಮುಸ್ಲಿಂ ಮಹಿಳೆಯರ ಹಕ್ಕು ಉಲ್ಲಂಘನೆಯಾಗಲಿದೆ ಎಂದು ಹೇಳಿದೆ.
ಮುಸ್ಲಿಂ ವೈಯಕ್ತಿಕ ಕಾನೂನುಗಳ ಬಗ್ಗೆಯೂ ಅಭಿಪ್ರಾಯ ನೀಡಿರುವ ಹೈಕೋರ್ಟ್, ಯಾವುದೇ ವೈಯಕ್ತಿಕ ಕಾನೂನು ಸಂವಿಧಾನಕ್ಕಿಂತ ದೊಡ್ಡದಲ್ಲ ಎಂದು ಹೇಳಿದ್ದು, ತ್ರಿವಳಿ ತಲಾಕ್ ನ್ನು ಬೆಂಬಲಿಸುತ್ತಿರುವ ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಕ್ರಮವನ್ನು ಟೀಕಿಸಿದೆ.
ಇತ್ತೀಚಿನ ದಿನಗಳಲ್ಲಿ ಹಲವು ಮುಸ್ಲಿಂ ಮಹಿಳೆಯರು ತ್ರಿವಳಿ ತಲಾಕ್ ಪದ್ಧತಿಯ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು. ತ್ರಿವಳಿ ತಲಾಕ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಕ್ಕೆ ಪ್ರತಿಕ್ರಿಯೆ ನೀಡಿದ್ದ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ತಮ್ಮ ವೈಯಕ್ತಿಕ ಕಾನೂನುಗಳಿಗೆ ಧಕ್ಕೆ ಉಂಟಾಗಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿತ್ತು.