ಅಪಘಾತ
ದೇಶ
ದಟ್ಟ ಮಂಜು: ಪಂಜಾಬ್‌ನಲ್ಲಿ ಭೀಕರ ರಸ್ತೆ ಅಪಘಾತ; 13 ಶಿಕ್ಷಕರ ಸಾವು
ದಟ್ಟ ಮಂಜು ಕವಿದ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಕರು ಪ್ರಯಾಣಿಸುತ್ತಿದ್ದ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ 13 ಶಿಕ್ಷಕರು ಸಾವನ್ನಪ್ಪಿರುವ ದಾರುಣ ಘಟನೆ...
ಚಂಡೀಘಡ: ದಟ್ಟ ಮಂಜು ಕವಿದ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಕರು ಪ್ರಯಾಣಿಸುತ್ತಿದ್ದ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ 13 ಶಿಕ್ಷಕರು ಸಾವನ್ನಪ್ಪಿರುವ ದಾರುಣ ಘಟನೆ ಚಂಡೀಘಡದಲ್ಲಿ ಸಂಭವಿಸಿದೆ.
ಇಂದು ಮುಂಜಾನೆ ಫಜಿಲ್ಕಾ-ಜಲಾಲಾಬಾದ್ ರಸ್ತೆಯಲ್ಲಿ ಈ ಭೀಕರ ದುರ್ಘಟನೆ ಸಂಭವಿಸಿದೆ. ದಟ್ಟ ಮಂಜು ಕವಿದ ಹಿನ್ನೆಲೆಯಲ್ಲಿ ವಾಹನ ಚಾಲಕನಿಗೆ ಎದುರಿಗೆ ಬರುತ್ತಿದ್ದ ಲಾರಿ ಕಾಣಿಸದ ಪರಿಣಾಮ ಅಪಘಾತ ಸಂಭವಿಸಿದೆ. ನಾಲ್ವರು ಮಹಿಳಾ ಶಿಕ್ಷಕರು ಸೇರಿದಂತೆ 13 ಮಂದಿ ಸಾವನ್ನಪ್ಪಿದ್ದಾರೆ.
ಅಪಘಾತ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನು ಮೃತ 13 ಶಿಕ್ಷಕರ ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಶಿಕ್ಷಕರ ಸಾವಿಗೆ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಅಮರಿಂದರ್ ಸಿಂಗ್ ಸಂತಾಪ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ