ಪ್ಲಾಸ್ಟಿಕ್ ಅಥವಾ ಪಾಲಿಮರ್ ತಲಾಧಾರದಿಂದ ಬ್ಯಾಂಕ್ ನೋಟುಗಳನ್ನು ಪ್ರಿಂಟ್ ಮಾಡಲು ನಿರ್ಧರಿಸಲಾಗಿದೆ. ವಸ್ತುಗಳನ್ನು ಪಡೆಯುವ ಪ್ರಕ್ರಿಯೆ ಆರಂಭಗೊಂಡಿದೆ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಇಂದು ಲೋಕಸಭೆಗೆ ಲಿಖಿತ ಹೇಳಿಕೆಯಲ್ಲಿ ತಿಳಿಸಿದರು. ಕಾಗದದ ಕರೆನ್ಸಿಗೆ ಬದಲಾಗಿ ಪ್ಲಾಸ್ಟಿಕ್ ಕರೆನ್ಸಿಗಳನ್ನು ಮುದ್ರಿಸುವ ಪ್ರಸ್ತಾಪ ಆರ್ ಬಿಐ ನೀಡಿದೆಯೇ ಎಂದು ಕೇಳಲಾದ ಪ್ರಶ್ನೆಗೆ ಅವರು ಉತ್ತರಿಸಿದರು.