ಕುಡಿದ ಅಮಲಿನಲ್ಲಿ ಎಟಿಎಂ ಸಾಲಿನ ಮೇಲೆ ಕಾರು ನುಗ್ಗಿಸಿದ ಚಾಲಕ; 15 ಮಂದಿಗೆ ಗಾಯ

ಸೊಲಾಪುರ: ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ಕಾರು ಚಲಾಯಿಸಿ ಎಟಿಎಂ ಮುಂದೆ ಸಾಲಿನಲ್ಲಿ ನಿಂತಿದ್ದ ಜನರಿಗೆ ಗುದ್ದಿದ ಪರಿಣಾಮ 15 ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಸೊಲಾಪುರ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.
ಸೊಲಾಪುರ-ಬಿಜಾಪುರದ ಅತಾರ್ ಪ್ರದೇಶದ ರಸ್ತೆಯಲ್ಲಿರುವ ಎಟಿಎಂ ಬಳಿ ಇಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ 500ಕ್ಕೂ ಹೆಚ್ಚು ಮಂದಿ ಸಾಲಿನಲ್ಲಿ ನಿಂತಿದ್ದರು. ಈ ವೇಳೆ ರಭಸದಿಂದ ಬಂದಿರುವ ಮಾರುತಿ ಕಾರೊಂದು ಏಕಾಏಕಿ ಜನರಿಗೆ ಗುದ್ದಿದೆ. ಈ ವೇಳೆ 15 ಮಂದಿ ಗಾಯಗೊಂಡಿದ್ದು, ಗಾಯಗೊಂಡವರ 15 ಜನರ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
ಕಾರು ಚಾಲಕನನ್ನು ಸುಭಾಷ್ ಚಾವನ್ ಎಂದು ಹೇಳಲಾಗುತ್ತಿದ್ದು, ಈತ ಸ್ಥಳೀಯ ರಾಜಕಾರಣೆಯಾಗಿದ್ದಾನೆಂದು ತಿಳಿದುಬಂದಿದೆ.
ಸುದ್ದಿ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಚಾಲಕನನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಆತ ಮದ್ಯಪಾನ ಮಾಡಿ ವಾಹನ ಚಲಾಯಿಸಿರುವುದ ಬೆಳಕಿಗೆ ಬಂದಿದೆ. ಪ್ರಸ್ತುತ ಚಾಲಕನ್ನು ಬಂಧನಕ್ಕೊಳಪಡಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


