ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹಾಗೂ ನ್ಯಾಮೂರ್ತಿ ಅಮಿತವ್ ರಾಯ್ ಅವರನ್ನೊಳಗೊಂಡ ಪೀಠ, ವಿಕಲಚೇತನರು ಕುಳಿತುಕೊಂಡೆ ರಾಷ್ಟ್ರಗೀತೆಗೆ ಗೌರವ ಸಲ್ಲಿಸಬಹುದಾಗಿದೆ ಎಂದು ಹೇಳಿದೆ. ಅಲ್ಲದೆ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಹಾಡುವ ವೇಳೆ ಬಾಗಿಲುಗಳನ್ನು ಮುಚ್ಚಬೇಕಾಗದ ಅಗತ್ಯ ಇಲ್ಲ ಎಂದು ಸ್ಪಷ್ಟಪಡಿಸಿದೆ.