ಮತ್ತೆ ಪ್ರತಿಭಟನೆಗೆ ಪ್ರತ್ಯೇಕತಾವಾದಿಗಳ ಕರೆ: ಸಂಕಷ್ಟದಲ್ಲಿ ಕಾಶ್ಮೀರ ಜನತೆ

ಉಗ್ರ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಮತ್ತೆ ಪ್ರತ್ಯೇಕತಾವಾದಿಗಳು ಪ್ರತಿಭಟನೆಗೆ ಕರೆ ನೀಡಿದ್ದು, ಪ್ರತಿಭಟನಾ ಕರೆಯಿಂದಾಗಿ ಕಾಶ್ಮೀರಿಗರು ಸಂಕಷ್ಟದಲ್ಲಿ ಜೀವನ ನಡೆಸುವ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶ್ರೀನಗರ: ಉಗ್ರ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಮತ್ತೆ ಪ್ರತ್ಯೇಕತಾವಾದಿಗಳು ಪ್ರತಿಭಟನೆಗೆ ಕರೆ ನೀಡಿದ್ದು, ಪ್ರತಿಭಟನಾ ಕರೆಯಿಂದಾಗಿ ಕಾಶ್ಮೀರಿಗರು ಸಂಕಷ್ಟದಲ್ಲಿ ಜೀವನ ನಡೆಸುವ ಪರಿಸ್ಥಿತಿ ಎದುರಾಗಿದೆ.
 
ಪ್ರತ್ಯೇಕತಾವಾದಿಗಳ ಪ್ರತಿಭಟನಾ ಕರೆಯಿಂದಾಗಿ ಕಾಶ್ಮೀರದಾದ್ಯಂತ ವ್ಯಾಪಾರ ವಹಿವಾಟುಗಳು ಸ್ಥಗಿತಗೊಂಡಿದ್ದು, ಸಾಮಾನ್ಯ ಜನರು ಸಂಕಷ್ಟದಲ್ಲಿ ಎದುರಿಸುವಂತಾಗಿದೆ. ಎಂದಿನಂತೆ ಶೈಕ್ಷಣಿಕ ಕ್ಷೇತ್ರಗಳು ಬಂದ್ ಆಗಿದ್ದು, ಸೀಮಿತ ಪ್ರದೇಶಗಳಲ್ಲಿ ಬಸ್ ಸಂಚಾರಿಸುತ್ತಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

ಜುಲೈ 8 ರಂದು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಬುರ್ಹಾನ್ ವಾನಿಯನ್ನು ಭಾರತೀಯ ಸೇನೆ ಹತ್ಯೆ ಮಾಡಿತ್ತು. ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಪ್ರತ್ಯೇಕತಾವಾದಿಗಳು ಪ್ರತಿಭಟನೆಗೆ ಕರೆ ನೀಡಿದ್ದರು. ಇದರಂತೆ ಕಾಶ್ಮೀರದಲ್ಲಿ ಕಳೆದ 5 ತಿಂಗಳಿನಿಂದಲೂ ಹಿಂಸಾಚಾರ ಮುಂದುವರೆಯುತ್ತಲೇ ಇದ್ದು, ಬಂದ್, ಪ್ರತಿಭಟನೆಗಳಿಂದಾಗಿ ಕಾಶ್ಮೀರಿಗರು ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com