ಅಗಸ್ಟಾ ಹಗರಣ: ವಾಯುಪಡೆ ಮಾಜಿ ಮುಖ್ಯಸ್ಥ ಎಸ್ ಪಿ ತ್ಯಾಗಿ 4 ದಿನ ಸಿಬಿಐ ವಶಕ್ಕೆ

ಅಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಹಗರಣ ಸಂಬಂಧ ಬಂಧನಕ್ಕೊಳಗಾಗಿರುವ ವಾಯುಪಡೆ ಮಾಜಿ ಮುಖ್ಯಸ್ಥ ಎಸ್ ಪಿ ತ್ಯಾಗಿ...
ಎಸ್ ಪಿ ತ್ಯಾಗಿ
ಎಸ್ ಪಿ ತ್ಯಾಗಿ
ನವದೆಹಲಿ: ಅಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಹಗರಣ ಸಂಬಂಧ ಬಂಧನಕ್ಕೊಳಗಾಗಿರುವ ವಾಯುಪಡೆ ಮಾಜಿ ಮುಖ್ಯಸ್ಥ ಎಸ್ ಪಿ ತ್ಯಾಗಿ ಹಾಗೂ ಇತರೆ ಮೂವರು ದೆಹಲಿ ಕೋರ್ಟ್ ಶನಿವಾರ ನಾಲ್ಕು ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿ ಆದೇಶಿಸಿದೆ.
ನಿನ್ನೆ ದೆಹಲಿಯಲ್ಲಿ ಎಸ್ ಪಿ ತ್ಯಾಗಿ ಹಾಗೂ ಅವರ ಸಹೋದರ ಸಂಬಂಧಿ ಸಂಜೀವ್ ತ್ಯಾಗಿ ಮತ್ತು ಗೌತಮ್ ಖೇತನ್ ಅವರನ್ನು ಬಂಧಿಸಿದ್ದ ಸಿಬಿಐ ಇಂದು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಗೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್ ಸಿಬಿಐ ಕೋರಿಕೆಯಂತೆ ಆರೋಪಿಗಳನ್ನು ನಾಲ್ಕು ದಿನಗಳ ಕಾಲ ಉನ್ನತ ತನಿಖಾ ಸಂಸ್ಥೆಯ ವಶಕ್ಕೆ ನೀಡಿದೆ.
ಎಸ್ ಪಿ ತ್ಯಾಗಿ ಮತ್ತು ಅವರ ಸಹೋದರ ಸಂಬಂಧಿಗಳು ಸೇರಿ ಒಟ್ಟು 13 ಮಂದಿ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದ್ದು, ತ್ಯಾಗಿ ಅವರು ಅಗಸ್ಟಾ ವೆಸ್ಟ್​ಲ್ಯಾಂಡನ್ನು ಹರಾಜುದಾರರ ಪಟ್ಟಿಗೆ  ಸೇರ್ಪಡೆ ಮಾಡಲು ಅನುಕೂಲವಾಗುವಂತೆ, ಹೆಲಿಕಾಪ್ಟರ್​ನ ಹಾರಾಟದ ಮಿತಿಯನ್ನು 6,000 ಮೀ.ನಿಂದ 4500 ಮೀ.ಗಳಿಗೆ (15,000 ಅಡಿಗಳು) ಇಳಿಸಿದರು. ಇದಕ್ಕೆ ಪ್ರತಿಯಾಗಿ ತ್ಯಾಗಿ  ಭಾರಿ ಪ್ರಮಾಣದ ಕಿಕ್ ಬ್ಯಾಕ್ ಪಡೆದಿದ್ದರು ಎಂಬ ಆರೋಪವನ್ನು ಅವರ ವಿರುದ್ಧ ಮಾಡಲಾಗಿದೆ.
ತ್ಯಾಗಿ ಅವರ ಬಂಧನ ವಿಳಂಬವಾಗಿರುವುದನ್ನು ಪ್ರಶ್ನಿಸಿರುವ ಜೆಡಿಯು ಹಗರಣದಲ್ಲಿ ತ್ಯಾಗಿಯವರ ಹೆಸರು ಹಿಂದಿನಿಂದಲೂ ಕೇಳಿಬಂದಿತ್ತು. ಆದರೆ ಈಗ ಬಂಧನವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com