ಗುಜರಾತ್ ಭೇಟಿ: ತಾಯಿಯ ಆಶೀರ್ವಾದ ಪಡೆದ ಪ್ರಧಾನಿ ಮೋದಿ

ಬಿಜೆಪಿ ಪಕ್ಷದ ಸಭೆ ಹಿನ್ನಲೆಯಲ್ಲಿ ಒಂದು ದಿನದ ಕಾಲ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುಜರಾತ್ ರಾಜ್ಯಕ್ಕೆ ಭೇಟಿ ನೀಡಿದ್ದು, ಭೇಟಿ ವೇಳೆ ಗಾಂಧಿನಗರದಲ್ಲಿರುವ ತಮ್ಮ ನಿವಾಸಕ್ಕೆ ಭೇಟಿ ನೀಡಿ ತಾಯಿ ಹೀರಾಬೆನ್ ಅವರ ಆಶೀರ್ವಾದವನ್ನು...
ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅವರ ತಾಯಿ ಹೀರಾಬೆನ್ (ಸಂಗ್ರಹ ಚಿತ್ರ)
ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅವರ ತಾಯಿ ಹೀರಾಬೆನ್ (ಸಂಗ್ರಹ ಚಿತ್ರ)
Updated on

ಗಾಂಧಿನಗರ: ಬಿಜೆಪಿ ಪಕ್ಷದ ಸಭೆ ಹಿನ್ನಲೆಯಲ್ಲಿ ಒಂದು ದಿನದ ಕಾಲ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುಜರಾತ್ ರಾಜ್ಯಕ್ಕೆ ಭೇಟಿ ನೀಡಿದ್ದು, ಭೇಟಿ ವೇಳೆ ಗಾಂಧಿನಗರದಲ್ಲಿರುವ ತಮ್ಮ ನಿವಾಸಕ್ಕೆ ಭೇಟಿ ನೀಡಿ ತಾಯಿ ಹೀರಾಬೆನ್ ಅವರ ಆಶೀರ್ವಾದವನ್ನು ಪಡೆದಿದ್ದಾರೆ.

ಕೊಬಾದಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಇಂದು ಸಭೆಯೊಂದನ್ನು ಆಯೋಜಿಸಲಾಗಿತ್ತು. ಈ ಹಿನ್ನಲೆಯಲ್ಲಿ ಹತ್ತಿರದಲ್ಲೇ ಇದ್ದ ತಮ್ಮ ನಿವಾಸಕ್ಕೆ ಭೇಟಿ ನೀಡಲು ಪ್ರಧಾನಿ ಮೋದಿಯವರು ನಿರ್ಧರಿಸಿದ್ದರು.

ಇದರಂತೆ ತಮ್ಮ ನಿವಾಸಕ್ಕೆ ಭೇಟಿ ನೀಡಿದ ಮೋದಿಯವರು, ತಾಯಿ ಹೀರಾ ಬೆನ್ ಅವರೊಂದಿಗೆ 20 ನಿಮಿಷಗಳ ಕಾಲ ಕಳೆದರು. ಈ ವೇಳೆ ತಾಯಿ ಹೀರಾಬೆನ್ ಅವರ ಆಶೀರ್ವಾದವನ್ನು ಪಡೆದು ಸಭೆಗೆ ಹಾಜರಾದರು ಎಂದು ಮೂಲಗಳಿಂದ ತಿಳಿದುಬಂದಿದೆ.

ಈ ಹಿಂದೆ ಮೋದಿಯವರು ಸೆಪ್ಟೆಂಬರ್ 17 ರಂದು ಗುಜರಾತ್ ಗೆ ಭೇಟಿ ನೀಡಿದ್ದರು. ಜನ್ಮದಿನಾಚರಣೆ ಹಿನ್ನಲೆಯಲ್ಲಿ ತಮ್ಮ ನಿವಾಸಕ್ಕೆ ಭೇಟಿ ನೀಡಿದ್ದ ಅವರು, ಅಂದು ತಾಯಿ ಹೀರಾಬೆನ್ ಅವರ ಆಶೀರ್ವಾದವನ್ನು ಪಡೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com