ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೆ ಜನ್ಮದಿನದ ಶುಭಾಶಯ ಕೋರಿದ ಪ್ರಧಾನಿ ಮೋದಿ

ಡಿ.12 ರಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ 81 ನೇ ಜನ್ಮದಿನವಾಗಿದ್ದು ಪ್ರಧಾನಿ ನರೇಂದ್ರ ಮೋದಿ ಶುಭಾಶಯ ತಿಳಿಸಿದ್ದಾರೆ.
ನರೇಂದ್ರ ಮೋದಿ-ಪ್ರಣಬ್ ಮುಖರ್ಜಿ (ಸಂಗ್ರಹ ಚಿತ್ರ)
ನರೇಂದ್ರ ಮೋದಿ-ಪ್ರಣಬ್ ಮುಖರ್ಜಿ (ಸಂಗ್ರಹ ಚಿತ್ರ)
Updated on: 
ನವದೆಹಲಿ: ಡಿ.12 ರಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ 81 ನೇ ಜನ್ಮದಿನವಾಗಿದ್ದು ಪ್ರಧಾನಿ ನರೇಂದ್ರ ಮೋದಿ ಶುಭಾಶಯ ತಿಳಿಸಿದ್ದಾರೆ. 
ಬೇರೆಲ್ಲಾ ವಿಷಯಗಳಿಗಿಂತ ದೇಶದ ಹಿತಾಸಕ್ತಿಗೆ ಆದ್ಯತೆ ನೀಡುವ, ಪ್ರಾಜ್ಞ ರಾಷ್ಟ್ರಪತಿಗಳನ್ನು ಹೊಂದಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಪ್ರಣಬ್ ಮುಖರ್ಜಿ ಅವರ ಅನುಭವ ಹಾಗೂ ಬುದ್ಧಿವಂತಿಕೆ ದೇಶಕ್ಕೆ ಲಾಭದಾಯಕವಾಗಿದೆ, ಅವರ ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ. 
ಪ್ರಣಬ್ ದಾ ದೇಶದ ಹಿತಾಸಕ್ತಿಯನ್ನು ಎಲ್ಲಕ್ಕಿಂತ ಹೆಚ್ಚು ಆದ್ಯತೆಯ ವಿಷಯವನ್ನಾಗಿ ಪರಿಗಣಿಸುತ್ತಾರೆ, ಅವರನ್ನು ರಾಷ್ಟ್ರಪತಿಯನ್ನಾಗಿ ಪಡೆದಿರುವುದಕ್ಕೆ ಹೆಮ್ಮೆ ಇದೆ ಎಂದು ಮೋದಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ. ರಾಷ್ತ್ರಪತಿ ಪ್ರಣಬ್ ಮುಖರ್ಜಿ ಅವರು ಜು.25, 2012 ರಲ್ಲಿ ದೇಶದ 13 ನೇ ರಾಷ್ಟ್ರಪತಿಗಳಾಗಿ ಅಧಿಕಾರ ಸ್ವೀಕರಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com