ಇನ್ನು ಎಷ್ಟು ಮಂದಿ ಪ್ರಾಣ ಕಳೆದುಕೊಳ್ಳಬೇಕು? ಮೋದಿಗೆ ಮಮತಾ ಪ್ರಶ್ನೆ

ಕೇಂದ್ರ ಸರ್ಕಾರ ಕೈಗೊಂಡ ನೋಟು ನಿಷೇಧದಿಂದಾಗಿ ಹೀಗಾಗಲೇ ಹಲವು ಮಂದಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನು ಎಷ್ಟು ಮಂದಿ ಜೀವ ಕಳೆದು...
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
Updated on: 

ಕೊಲ್ಕೋತಾ; ಕೇಂದ್ರ ಸರ್ಕಾರ ಕೈಗೊಂಡ ನೋಟು ನಿಷೇಧದಿಂದಾಗಿ ಹೀಗಾಗಲೇ ಹಲವು ಮಂದಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನು ಎಷ್ಟು ಮಂದಿ ಜೀವ ಕಳೆದು ಕೊಳ್ಳಬೇಕು ಮೋದಿ ಬಾಬು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.

ತೃಣಮೂಲ ಕಾಂಗ್ರೆಸ್ ವಕ್ತಾರ ಹಾಗೂ ರಾಜ್ಯ ಸಭೆ ಸದಸ್ಯ ಡೆರೆಕ್ ಓ ಬೆರೆನ್ ತಮ್ಮ ಟ್ಟಿಟ್ಟರ್ ನಲ್ಲಿ , ಅನಾಣ್ಯೀಕರಣದ ನಂತರ ಹಣ ಪಡೆದುಕೊಳ್ಳಲು ಎಟಿಎಂ ಕ್ಯೂ ನಲ್ಲಿ ನಿಂತು ಇದುವರೆಗೂ ಸುಮಾರು 95 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹಲವು ಮಂದಿ ಹಣ ಪಡೆದುಕೊಳ್ಳಲು ಸಾಧ್ಯವಾಗದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಟ್ವೀಟ್ ಮಾಡಿದ್ದರು.

ಇದಕ್ಕೆ ಪ್ರತಿ ಟ್ವೀಟ್ ಮಾಡಿರುವ ಮಮತಾ ಬ್ಯಾನರ್ಜಿ ಇನ್ನೂ ಎಷ್ಟು ಮಂದಿ ಪ್ರಾಣ ಕಳೆದುಕೊಳ್ಳಬೇಕು ಮೋದಿ ಬಾಬು ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com