ಥಿಯೇಟರ್ ನಲ್ಲಿ ರಾಷ್ಟ್ರಗೀತೆ ಹಾಡುವ ವೇಳೆ ಎದ್ದು ನಿಲ್ಲದ ವಿದ್ಯಾರ್ಥಿಗಳ ಮೇಲೆ ಹಲ್ಲೆ!

ಚಿತ್ರ ಪ್ರಸಾರಕ್ಕೂ ಮುನ್ನ ಪ್ರಸಾರವಾದ ರಾಷ್ಟ್ರಗೀತೆ ವೇಳೆ ಎದ್ದು ನಿಂತು ಗೌರವ ನೀಡಲಿಲ್ಲ ಎಂದು ಆರೋಪಿಸಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಘಟನೆ ಚೆನ್ನೈ ನಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಚೆನ್ನೈ: ಚಿತ್ರ ಪ್ರಸಾರಕ್ಕೂ ಮುನ್ನ ಪ್ರಸಾರವಾದ ರಾಷ್ಟ್ರಗೀತೆ ವೇಳೆ ಎದ್ದು ನಿಂತು ಗೌರವ ನೀಡಲಿಲ್ಲ ಎಂದು ಆರೋಪಿಸಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಘಟನೆ ಚೆನ್ನೈ ನಲ್ಲಿ ನಡೆದಿದೆ.

ಚೆನ್ನೈನ ಅಶೋಕ್ ನಗರದಲ್ಲಿರುವ ಕಾಶಿ ಥಿಯೇಟರ್ ನಲ್ಲಿ ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಚೆನ್ನೈ 600028 ಭಾಗ-2ರ ಚಿತ್ರದ ಪ್ರಸಾರ ನಡೆಯುತ್ತಿದ್ದ ವೇಳೆ ಓರ್ವ ಯುವತಿ ಸೇರಿದಂತೆ ಮೂವರು ವಿದ್ಯಾರ್ಥಿಗಳನ್ನು ಸಹ  ಪ್ರೇಕ್ಷಕರು ಥಳಿಸಿದ್ದಾರೆ. ಚಿತ್ರ ಪ್ರಸಾರಕ್ಕೂ ಮುನ್ನ ರಾಷ್ಟ್ರಗೀತೆ ಪ್ರಸಾರವಾಗುತ್ತಿದ್ದ ವೇಳೆ ಈ ಮೂವರು ಎದ್ದು ನಿಂತು ಗೌರವ ಸಲ್ಲಿಸಲಿಲ್ಲ ಎಂದು ಆಕ್ರೋಶಗೊಂಡ ಸಹ ಪ್ರೇಕ್ಷಕರ ಗುಂಪೊಂದು ವಿದ್ಯಾರ್ಥಿಗಳನ್ನು ಥಳಿಸಿದ್ದಾರೆ.  ಸುಮಾರು 20 ಜನರ ಗುಂಪು ವಿದ್ಯಾರ್ಥಿಗಳನ್ನು ಥಳಿಸಿದ್ದು, ಇಬ್ಬರೂ ಪರಸ್ಪರರ ಮೇಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅತ್ತ ವಿದ್ಯಾರ್ಥಿಗಳು ರಾಷ್ಟ್ರಗೀತೆಗೆ ಅಗೌರವ ತೋರಿದ ಸಂಬಂಧ ಕೆಲವರು ದೂರು ದಾಖಲಿಸಿದ್ದರೆ, ಹಲ್ಲೆಗೊಳಗಾದ ವಿದ್ಯಾರ್ಥಿಗಳು ಕೊಲೆ ಬೆದರಿಕೆ ಮತ್ತು ಹಲ್ಲೆಯಾದ ಕುರಿತು ದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.  ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಂತೆಯೇ ಎರಡೂ ಗುಂಪನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಇತ್ತೀಚೆಗಷ್ಟೇ ಸುಪ್ರೀಂ ಕೋರ್ಟ್ ದೇಶದ ಎಲ್ಲ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಯನ್ನು ಕಡ್ಡಾಯಗೊಳಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com