ನಾಲ್ಕು ದಿನಗಳ ಸುದೀರ್ಘ ರಜೆಯ ನಂತರ ಸಂಸತ್ ಕಲಾಪ ಬುಧವಾರ ಪುನಾಃ ಆರಂಭವಾಗಿದ್ದು, ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಅವರ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಕಾಂಗ್ರೆಸ್ ಲೋಕಸಭೆಯಲ್ಲಿ ಪ್ರತಿಭಟನೆ ನಡೆಸಿ, ಕೋಲಾಹಲ ಎಬ್ಬಿಸಿದ ಹಿನ್ನೆಲೆಯಲ್ಲಿ ಸ್ಪೀಕರ್ ಸುಮಿತ್ರಾ ಮಹಾಜನ್ ಕಲಾಪವನ್ನು ಮಧ್ಯಾಹ್ನದವರೆಗೆ ಮುಂದೂಡಿದ್ದಾರೆ.