ನಿರಾಶೆಗೊಂಡಿರುವ ರಾಹುಲ್ ಮೋದಿ ವಿರುದ್ಧ ಸಾಕ್ಷ್ಯವಿದೆ ಎಂದು ಹೇಳುತ್ತಿದ್ದಾರೆ: ಕೇಂದ್ರ

ನಿರಾಶೆ ಹಾಗೂ ಅಸಮಾಧಾನಗೊಂಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಸಾಕ್ಷ್ಯಾಧಾರವಿದೆ ಎಂದು ಹೇಳುತ್ತಿದ್ದಾರೆಂದು ಕೇಂದ್ರ ಸರ್ಕಾರ ಬುಧವಾರ ಹೇಳಿದೆ...
ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್
ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್

ನವದೆಹಲಿ: ನಿರಾಶೆ ಹಾಗೂ ಅಸಮಾಧಾನಗೊಂಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಸಾಕ್ಷ್ಯಾಧಾರವಿದೆ ಎಂದು ಹೇಳುತ್ತಿದ್ದಾರೆಂದು ಕೇಂದ್ರ ಸರ್ಕಾರ ಬುಧವಾರ ಹೇಳಿದೆ.

ಈ ಕುರಿತಂತೆ ಮಾತನಾಡಿರುವ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಅವರು, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ತಮ್ಮಲ್ಲಿರುವ ನಿರಾಶೆ ಹಾಗೂ ಅಸಮಾಧಾನವನ್ನು ಇಡೀ ವಿಶ್ವದ ಮುಂದೆ ವ್ಯಕ್ತಪಡಿಸಿದ್ದಾರೆ. ನಿರಾಶೆಗೊಂಡಿರುವ ರಾಹುಲ್ ಪ್ರಧಾನಿ ವಿರುದ್ದ ಹೇಳಿಕೆ ನೀಡುತ್ತಿದ್ದಾರೆಂದು ಹೇಳಿದ್ದಾರೆ.

ನಿನ್ನೆಯಷ್ಟೇ ಖಾಸಗಿ ಸುದ್ದಿ ವಾಹಿನಿಯೊಂದು ಕುಟುಕು ಕಾರ್ಯಾಚರಣೆಯನ್ನು ನಡೆಸಿತ್ತು. ಕಾಂಗ್ರೆಸ್, ಬಹುಜನ ಸಮಾಜ ಪಕ್ಷದ ಹಾಗೂ ಸಮಾಜವಾದಿ ಪಕ್ಷಗಳು ಹೇಗೆ ನೋಟು ನಿಷೇಧ ವಿಚಾರವನ್ನು ಹೇಗೆ ಬದಲಾಯಿಸುತ್ತಿದ್ದಾರೆಂಬುದನ್ನು ಬಹಿರಂಗಪಡಿಸಿದ್ದರು. ಇದರಿಂದ ನಿರಾಶೆ ಹಾಗೂ ಅಸಮಾಧಾನ ಗೊಂಡಿರುವ ರಾಹುಲ್ ಅವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆಂದು ಹೇಳಿದ್ದಾರೆ.

ಒಂದು ವೇಳೆ ರಾಹುಲ್ ಬಳಿ ಸಾಕ್ಷ್ಯಾಧಾರಗಳು ಇದ್ದಿದ್ದೇ ಆಗಿದ್ದರೆ, 20 ದಿನಗಳ ಹಿಂದೆಯೇ ಬಿಡುಗಡೆ ಮಾಡುತ್ತಿದ್ದರು. ಪ್ರಧಾನಿ ಮೋದಿ ವಿರುದ್ಧ ರಾಹುಲ್ ಅವರು ಆಧಾರ ರಹಿತ ಹೇಳಿಕೆಗಳನ್ನು ನೀಡುತ್ತಿದ್ದಾರೆಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com