ಮುಂಬೈನಲ್ಲಿ ಭೀಕರ ದುರಂತ: ಮನೆ ಕುಸಿದು ಮೂವರ ಸಾವು, 12 ಮಂದಿಯ ರಕ್ಷಣೆ

ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಮತ್ತೊಂದು ಕಟ್ಟಡ ದುರಂತ ಸಂಭವಿಸಿದ್ದು, ಮನೆ ಕುಸಿದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ.
ಮುಂಬೈನಲ್ಲಿ ಕುಸಿದ ಮನೆ
ಮುಂಬೈನಲ್ಲಿ ಕುಸಿದ ಮನೆ
Updated on: 

ಮುಂಬೈ: ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಮತ್ತೊಂದು ಕಟ್ಟಡ ದುರಂತ ಸಂಭವಿಸಿದ್ದು, ಮನೆ ಕುಸಿದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ.

ಮುಂಬೈನ ಮಹಾರಾಷ್ಟ್ರ ನಗರದ ಮನ್ಕುರ್ದ್ ಪ್ರದೇಶದಲ್ಲಿ ಇಂದು ಬೆಳಗ್ಗೆ ಸುಮಾರು 6.30 ಈ ದುರಂತ ಸಂಭವಿಸಿದ್ದು, ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಈ ವರೆಗೂ 12 ಮಂದಿಯನ್ನು ರಕ್ಷಣೆ  ಮಾಡಲಾಗಿದ್ದು, ಕಟ್ಟಡದ ಅವಶೇಷಗಳಡಿ ಸಿಲುಕಿರಬಹುದಾದವರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಪ್ರಸ್ತುತ ಮೂರು ಅಗ್ನಿಶಾಮಕ ದಳದ ವಾಹನಗಳು ಹಾಗೂ ಹತ್ತಾರು ಸಿಬ್ಬಂದಿ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ರಕ್ಷಣಾ  ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಘಟನೆಯಲ್ಲಿ ನಾಲ್ವರು ಮಹಿಳೆಯರು, ನಾಲ್ಕು ಮಂದಿ ಪುರುಷರು ಹಾಗೂ ಏಳು ಮಕ್ಕಳು ಗಾಯಗೊಂಡಿದ್ದಾರೆ. ಎರಡು ಆ್ಯಂಬುಲೆನ್ಸ್ ವಾಹನಗಳಲ್ಲಿ ಗಾಯಾಳುಗಳನ್ನು ಸಮೀಪದ ಶತಾಬ್ದಿ ಮತ್ತು ಸಿಯಾನ್ ಆಸ್ಪತ್ರೆಗೆ ದಾಖಲು  ಮಾಡಲಾಗಿದೆ ಎಂದು ತಿಳಿದುಬಂದಿದೆ. ಸ್ಥಳೀಯರು ನೀಡಿರುವ ಮಾಹಿತಿಯಂತೆ ಕಟ್ಟಡ ಕುಸಿತ ಸಂದರ್ಭದಲ್ಲಿ 15ಕ್ಕೂ ಹೆಚ್ಚು ಮಂದಿ ಇದ್ದರು ತಿಳಿದುಬಂದಿದೆ.

ಪೊಲೀಸರು ತಿಳಿಸಿರುವಂತೆ ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿದ್ದು, ಬೆಳಗ್ಗೆ ಲೈಟ್ ಹಾಕುತ್ತಿದ್ದಂತೆಯೇ ಸ್ಫೋಟವಾಗಿದೆ. ಪರಿಣಾಮ ಮನೆ ಕುಸಿದಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com