ಸ್ವಾತಂತ್ರ್ಯ ಹೋರಾಟದಲ್ಲಿ ಸರ್ದಾರ್ ಪಟೇಲ್ ಅವರ ಪಾತ್ರ ಅಗಾಧವಾದದ್ದು: ಪ್ರಧಾನಿ ಮೋದಿ

ಸ್ವಾತಂತ್ರ್ಯ ಹೋರಾಟದಲ್ಲಿ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಪಾತ್ರ ಅಗಾಧವಾದದ್ದು, ಪಟೇಲ್ ಅವರಿಗೆ ಭಾರತ ಎಂದಿಗೂ ಆಭಾರಿಯಾಗಿರುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು...
ಪ್ರಧಾನಮಂತ್ರಿ ನರೇಂದ್ರ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ

ನವದೆಹಲಿ: ಸ್ವಾತಂತ್ರ್ಯ ಹೋರಾಟದಲ್ಲಿ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಪಾತ್ರ ಅಗಾಧವಾದದ್ದು, ಪಟೇಲ್ ಅವರಿಗೆ ಭಾರತ ಎಂದಿಗೂ ಆಭಾರಿಯಾಗಿರುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಹೇಳಿದ್ದಾರೆ.

ಮಾಜಿ ಪ್ರಧಾನಿ, ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 66ನೇ ಪುಣ್ಯ ತಿಥಿ ಹಿನ್ನೆಲೆಯಲ್ಲಿ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಸರ್ದಾರ್ ಪಟೇಲ್ ಆವರು ಪುಣ್ಯತಿಥಿ ಹಿನ್ನೆಲೆಯಲ್ಲಿ ಶ್ರದ್ಧಾಂಜಲಿ ಅರ್ಪಿಸುತ್ತಿದ್ದೇನೆ. ಸ್ವಾತಂತ್ರ್ಯ ಹೋರಾಟದಲ್ಲಿ ಸರ್ದಾರ್ ಪಟೇಲ್ ಅವರ ಪಾತ್ರ ಹಾಗೂ ನಿರ್ಣಾಯಕ ನಾಯಕತ್ವ ಅಗಾಧವಾದದ್ದು, ಪಟೇಲ್ ಅವರಿಗೆ ಭಾರತ ಎಂದಿಗೂ ಆಭಾರಿಯಾಗಿರುತ್ತದೆ ಎಂದು ಹೇಳಿದ್ದಾರೆ.

ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದ ಪ್ರಮುಖ ನಾಯಕರಲ್ಲಿ ಸರ್ದಾರ್ ಪಟೇಲ ಅವರೂ ಕೂಡ ಒಬ್ಬರಾಗಿದ್ದರು. 565 ರಾಜ ಸಂಸ್ಥಾನಗಳನ್ನು ಭಾರತದಲ್ಲಿ ವಿಲೀನಗೊಳಿಸಿ, ಪ್ರಜಾಪ್ರಭುತ್ವವನ್ನು ಜಾರಿಗೊಳಿಸಿ, ದೇಶದ ರಕ್ಷಣೆಯ ವ್ಯವಸ್ಥೆಯನ್ನು ರೂಪಿಸಿರುವ ಹಾಗೂ ಭಾರತವನ್ನು ಒಗ್ಗಟ್ಟಾದ ದೇಶವನನ್ನಾಗಿ ಕಟ್ಟುವ ಮಹತ್ತರ ಜವಾಬ್ದಾರಿಯನ್ನು ಪಟೇಲರು ಹೊತ್ತುಕೊಂಡಿದ್ದರು. ಅಲ್ಲದೆ, ಅಧಿಕಾರದ ವಿಕೇಂದ್ರೀಕರಣ, ಧಾರ್ಮಿಕ ಸಮಾನತೆ ಮತ್ತು ಸ್ವಾತಂತ್ರ್ಯ, ಆಸ್ತಿ ಹಕ್ಕು ಇತ್ಯಾದಿ ವಿಷಯಗಳನ್ನು ವಿಷದೀಕರಿಸಿ, ಭಾರತದ ಸಂವಿಧಾನದ ರಚನೆಯಲ್ಲಿ ಮಹತ್ವದ ಕೊಡುಗೆಯನ್ನು ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com