ವ್ಯಾಪಂ ಹಗರಣದಲ್ಲಿ ಅಂತಿಮವಾಗಿ ಸತ್ಯಕ್ಕೆ ಗೆಲುವು: ಸಿಎಂ ಚೌಹಾಣ್

ನನ್ನ ವಿರುದ್ಧ ಏನೇ ಆರೋಪಗಳ ಬಂದರೂ ಅಂತಿಮವಾಗಿ ಸತ್ಯಕ್ಕೆ ಜಯ ಸಿಗುತ್ತದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ಹೇಳಿದ್ದಾರೆ...
ಶಿವರಾಜ್ ಸಿಂಗ್ ಚೌಹಾಣ್
ಶಿವರಾಜ್ ಸಿಂಗ್ ಚೌಹಾಣ್

ನವದೆಹಲಿ: ನನ್ನ ವಿರುದ್ಧ ಏನೇ ಆರೋಪಗಳ ಬಂದರೂ ಅಂತಿಮವಾಗಿ ಸತ್ಯಕ್ಕೆ ಜಯ ಸಿಗುತ್ತದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ಹೇಳಿದ್ದಾರೆ.

ಮಧ್ಯಪ್ರದೇಶದಲ್ಲಿ ನಡೆದಿದ್ದ ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಹೆಚ್ಚಿನ ವಿಚಾರಣೆ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದ ನಂತರ, ಪ್ರತಿಕ್ರಿಯಿಸಿರುವ ಚೌಹಾಣ್ಎಲ್ಲಾ ಆರೋಪಗಳು ಸುಳ್ಳು ಎಂಬುದು ಸಾಬೀತಾಗುತ್ತಿದೆ. ಇದರಲ್ಲಿ ಮುಚ್ಚು ಮರೆ ಮಾಡುವಂತಹದ್ದು ಏನು ಇಲ್ಲ, ನನ್ನ ವಿರುದ್ಧ ಮಾಡಿರುವ ಎಲ್ಲಾ ಆರೋಪಗಳು ಸತ್ಯಕ್ಕೆ ದೂರವಾದವು. ಈ ಆರೋಪಗಳಿಂದ ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ಉಂಟಾಯಿತು. ನನ್ನ ಕುಟುಂಬಸ್ಥರನ್ನು ಇದರಲ್ಲಿ ಎಳೆದು ತರಲಾಯಿತು ಎಂದು ಹೇಳಿದ್ದಾರೆ.

ಮಧ್ಯ ಪ್ರದೇಶದಲ್ಲಿ ಸರ್ಕಾರಿ ನೇಮಕಾತಿಯಲ್ಲಿ ನಡೆದಿದ್ದ ಬಹು ದೊಡ್ಡ ಹಗರಣವಾಗಿತ್ತು. ಇದರಲ್ಲಿ ಹಲವಾರು ರಾಜಕಾರಣಿಗಳು, ಹಿರಿಯ ಅಧಿಕಾರಿಗಳು.ಉದ್ಯಮಿಗಳು ಭಾಗಿಯಾಗಿದ್ದಾರೆಂದು ಆರೋಪಿಸಲಾಗಿತ್ತು. ಈ ಪ್ರಕರಣ ಸಂಬಂಧ ಸಿಬಿಐ ಸುಮಾರು 72ಕೇಸುಗಳನ್ನು ದಾಖಲಿಸಿತ್ತು.  2013 ರಿಂದ ವಿವಿಧ ಕಾರಣಗಳಿಂದಾಗಿ ಹಗರಣದಲ್ಲಿ ಪಾಲ್ಗೊಂಡಿದ್ದ 40 ಮಂದಿ ನಿಗೂಡವಾಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com