ಶ್ವಾಸಕೋಶ ಸೋಂಕು: ಮತ್ತೆ ಆಸ್ಪತ್ರೆಗೆ ದಾಖಲಾದ ಕರುಣಾನಿಧಿ

ಡಿಎಂಕೆ ಪಕ್ಷದ ಮುಖ್ಯಸ್ಥ ಎಂ. ಕರುಣಾನಿಧಿಯವರು ಮತ್ತೆ ಅನಾರೋಗ್ಯಕ್ಕೀಡಾಗಿದ್ದು, ಗುರುವಾರ ತಡರಾತ್ರಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ...
ಅನಾರೋಗ್ಯಕ್ಕೀಡಾದ ಕರುಣಾನಿಧಿಯನ್ನು ಆಸ್ಪತ್ರೆಗೆ ಸಾಗಿಸುತ್ತಿರುವ ಚಿತ್ರ
ಅನಾರೋಗ್ಯಕ್ಕೀಡಾದ ಕರುಣಾನಿಧಿಯನ್ನು ಆಸ್ಪತ್ರೆಗೆ ಸಾಗಿಸುತ್ತಿರುವ ಚಿತ್ರ

ಚೆನ್ನೈ: ಡಿಎಂಕೆ ಪಕ್ಷದ ಮುಖ್ಯಸ್ಥ ಎಂ. ಕರುಣಾನಿಧಿಯವರು ಮತ್ತೆ ಅನಾರೋಗ್ಯಕ್ಕೀಡಾಗಿದ್ದು, ಗುರುವಾರ ತಡರಾತ್ರಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ಕರುಣಾನಿಧಿಯವರಿಗೆ ಶ್ವಾಸಕೋಶ  ಸೋಂಕು ಉಂಟಾಗಿದ್ದು, ಅಜೀರ್ಣ ಹಾಗೂ ಶೀತದಿಂದ ಬಳಲುತ್ತಿದ್ದರು. ಪರಿಣಾಮ ಉಸಿರಾಟಕ್ಕೆ ತೊಂದರೆಯುಂಟಾದ ಕಾರಣ ಆಸ್ಪತ್ರೆಗೆ ಮರುದಾಖಲಾಗಿದ್ದಾರೆಂದು ಹೇಳಲಾಗುತ್ತಿದೆ.

ಕರುಣಾನಿಧಿ ಅವರು ಆಸ್ಪತ್ರೆಗೆ ಮರುದಾಖಲಾಗಿರುವ ಕುರಿತಂತೆ ಆಸ್ಪತ್ರೆಯ ವೈದ್ಯರು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಕರುಣಾ ನಿಧಿಯವರಿಗೆ ಶ್ವಾಸಕೋಶ ಸೋಂಕು ಎದುರಾಗಿದ್ದು, ಪರಿಣಾಮ ಉಸಿರಾಟಕ್ಕೆ ಸಮಸ್ಯೆಯುಂಟಾಗಿದೆ. ಹೀಗಾಗಿ ಆಸ್ಪತ್ರೆಗೆ ಮರುದಾಖಲಾಗಿದ್ದಾರೆ. ಇದೀಗ ಅವರ ಆರೋಗ್ಯ ಸ್ಥಿತಿ ಸುಧಾರಿಸಿದೆ ಎಂದು ಹೇಳಿದ್ದಾರೆ.

ಕೆಲದಿನಗಳ ಹಿಂದಷ್ಟೇ ನಿರ್ಜಲೀಕರಣದಿಂದ ಬಳಲುತ್ತಿದ್ದ ಕರುಣಾನಿಧಿಯವರು ಡಿಸೆಂಬರ್ 1 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆದುಕೊಂಡು ಆರೋಗ್ಯ ಸುಧಾರಿಸಿದ ಬಳಿಕ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com