ಪೂಂಚ್ ನಲ್ಲಿ ಸೇನಾ ಪೋಸ್ಟ್, ನಾಗರಿಕ ಪ್ರದೇಶ ಗುರಿಯಾಗಿಸಿಕೊಂಡು ಪಾಕ್ ದಾಳಿ

ಕೇವಲ ಮೂರು ವಾರಗಳ ನಂತರ ಮತ್ತೆ ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನ ಸೇನೆ, ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಪೂಂಚ್: ಕೇವಲ ಮೂರು ವಾರಗಳ ನಂತರ ಮತ್ತೆ ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನ ಸೇನೆ, ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಬಾಲಕೋಟೆ ಸೆಕ್ಟರ್ ನಲ್ಲಿ ಭಾರತೀಯ ಸೇನಾ ಶಿಬಿರ ಮತ್ತು ನಾಗರಿಕ ಪ್ರದೇಶಗಳನ್ನು ಗುರಿಯಾಸಿಕೊಂಡು ಶುಕ್ರವಾರ ಭಾರಿ ಗುಂಡಿನ ದಾಳಿ ನಡೆಸಿದೆ.
ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿ ಗಡಿ ನಿಯಂತ್ರಣ ರೇಖೆ ಬಳಿ ನಮ್ಮ ಸೇನೆ ಮತ್ತು ನಾಗರಿಕರನ್ನು ಗುರಿಯಾಗಿಸಿಕೊಂಡು ಬೆಳಗ್ಗೆ 9ಗಂಟೆಯಿಂದ 10 ಗಂಟೆಯವರೆಗೆ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಭಾರತ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಸೇನಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪಾಕಿಸ್ತಾನ ಸೇನಾಪಡೆ ಹಾರಿಸಿದ ಗುಂಡುಗಳು ಬಾಲಕೋಟೆ ಸೆಕ್ಟರ್ ನ ನಾಗರಿಕ ಪ್ರದೇಶದಲ್ಲಿ ಪತ್ತೆಯಾಗಿವೆ. ಆದರೆ ದಾಳಿಯಲ್ಲಿ ಗಾಯಗೊಂಡ ಬಗ್ಗೆ ಅಥವಾ ಯಾವುದೇ ಜೀವಹಾನಿ ಬಗ್ಗೆ ಇನ್ನೂ ಮಾಹಿತಿ ಇಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ ಭಾರತೀಯ ಯೋಧರು ನಡೆಸಿದ ಪ್ರತಿದಾಳಿಯಲ್ಲಿ ಪಾಕಿಸ್ತಾನದ ಒಬ್ಬ ನಾಗರಿಕ ಮೃತಪಟ್ಟಿರುವುದಾಗಿ ಮತ್ತು ನಾಲ್ವರು ಶಾಲಾ ಮಕ್ಕಳು ಗಾಯಗೊಂಡಿರುವುದಾಗಿ ಪಾಕ್ ಸೇನೆ ಹೇಳಿಕೊಂಡಿದೆ.
ನವೆಂಬರ್ 23ರಂದು ಪಾಕ್ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಇಬ್ಬರು ಬಿಎಸ್ಎಫ್ ಯೋಧರು ಗಾಯಗೊಂಡಿದ್ದರು. ಇದಾದ ಮರುದಿನ ನಡೆದ ಗುಂಡಿನ ದಾಳಿಯಲ್ಲಿ ಮೂವರು ಭಾರತೀಯ ಯೋಧರು ಹುತಾತ್ಮರಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com