ಇಸಿಸ್ ಜತೆ ನಂಟು; ಹಿ.ಪ್ರದೇಶದಲ್ಲಿ ಬೆಂಗಳೂರು ಮೂಲದ ವ್ಯಕ್ತಿ ಬಂಧನ

ಕುಖ್ಯಾತ ಉಗ್ರಗಾಮಿ ಸಂಘಟನೆ ಇಸ್ಲಾಮಿಕ್ ಸ್ಟೇಟ್ ಜತೆ ಸಂಪರ್ಕ ಹೊಂದಿರುವ ಆರೋಪದ ಮೇರೆಗೆ ಬೆಂಗಳೂರು ಮೂಲದ ವ್ಯಕ್ತಿಯೊಬ್ಬನನ್ನು ರಾಷ್ಟ್ರೀಯ ತನಿಖಾದಳದ ಅಧಿಕಾರಿಗಳು ಬಂಧಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಶಿಮ್ಲಾ: ಕುಖ್ಯಾತ ಉಗ್ರಗಾಮಿ ಸಂಘಟನೆ ಇಸ್ಲಾಮಿಕ್ ಸ್ಟೇಟ್ ಜತೆ ಸಂಪರ್ಕ ಹೊಂದಿರುವ ಆರೋಪದ ಮೇರೆಗೆ ಬೆಂಗಳೂರು ಮೂಲದ ವ್ಯಕ್ತಿಯೊಬ್ಬನನ್ನು ರಾಷ್ಟ್ರೀಯ ತನಿಖಾದಳದ ಅಧಿಕಾರಿಗಳು ಬಂಧಿಸಿದ್ದಾರೆ.

ಮೂಲಗಳ ಪ್ರಕಾರ ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಸಿದ ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಅಧಿಕಾರಿಗಳು ಬೆಂಗಳೂರು ಮೂಲದ ಅಬೀದ್ ಖಾನ್ ಎಂಬಾತನನ್ನು ಬಂಧಿಸಿದ್ದಾರೆ ಎಂದು  ತಿಳಿದುಬಂದಿದೆ. ನಕಲಿ ಗುರುತಿನ ಚೀಟಿ ಹೊಂದಿದ್ದ ಅಬೀದ್ ಖಾನ್ ಕಲ್ಲು ಜಿಲ್ಲೆಯ ಬಂಜಾರ ಗ್ರಾಮದ ಚರ್ಚ್ ವೊಂದರಲ್ಲಿ ಕಳೆದ ನಾಲ್ಕು ತಿಂಗಳಿನಿಂದ ವಾಸಿಸುತ್ತಿದ್ದ. ಈ ಬಗ್ಗೆ ಖಚಿತ ಮಾಹಿಚತಿ ಪಡೆದ ಅಧಿಕಾರಿಗಳು ಶನಿವಾರ  ಕಾರ್ಯಾಚರಣೆ ನಡೆಸಿ ಅಬೀದ್ ಖಾನ್ ನನ್ನು ಬಂಧಿಸಿದ್ದಾರೆ.

ಕಾರ್ಯಾಚರಣೆ ವೇಳೆ ಹಿಮಾಚಲ ಪ್ರದೇಶ ಪೊಲೀಸರು ಅಧಿಕಾರಿಗಳಿಗೆ ಸಾಥ್ ನೀಡಿದ್ದರು ಎಂದು ತಿಳಿದುಬಂದಿದೆ.  ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಹಿಮಾಚಲ ಪ್ರದೇಶ ಪೊಲೀಸ್ ಮಹಾ ನಿರ್ದೇಶಕ ಸಂಜಯ್  ಕುಮಾರ್ ಅವರು, ದೆಹಲಿಯಲ್ಲಿ ಇತ್ತೀಚೆಗೆ ನಡೆದ ಕಾರ್ಯಾಚರಣೆಯಲ್ಲಿ ಕೆಲ ಶಂಕಿತ ಉಗ್ರರನ್ನು ಬಂಧಿಸಲಾಗಿತ್ತು. ಅವರು ನೀಡಿದ ಮಾಹಿತಿ ಮೇರೆಗೆ ಶನಿವಾರ ಕುಲ್ಲು ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಸಿ ಅಬೀದ್ ಖಾನ್ ನನ್ನು  ಬಂಧಿಸಲಾಗಿದೆ. ವಿಚಾರಣೆ ವೇಳೆ ಈತ ಇಸಿಸ್ ಸಿದ್ಧಾಂತಗಳಿಂದ ತಾನು ಪ್ರೇರೇಪಣೆ ಗೊಂಡಿದ್ದೆ ಎಂಬ ವಿಚಾರವನ್ನು ಒಪ್ಪಿಕೊಂಡಿದ್ದಾನೆ. ವಿಚಾರಣೆ ನಡೆಯುತ್ತಿದೆ. ಹೀಗಾಗಿ ಅತನ ಬಗ್ಗೆ ಹೆಚ್ಚು ಮಾಹಿತಿ ನೀಡಲು ಸಾಧ್ಯವಿಲ್ಲ  ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com