ಉತ್ತರ ಪ್ರದೇಶ: ಬಿಜೆಪಿಗೆ ಮತ ನೀಡದಂತೆ ಅರವಿಂದ್ ಕೇಜ್ರಿವಾಲ್ ಮನವಿ

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಉತ್ತರ ಪ್ರದೇಶದ ಜನತೆಗೆ ಬಿಜೆಪಿಗೆ ಮತ ನೀಡದಂತೆ ಮನವಿ ಮಾಡಿದ್ದಾರೆ.
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
Updated on: 
ಲಖನೌ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಉತ್ತರ ಪ್ರದೇಶದ ಜನತೆಗೆ ಬಿಜೆಪಿಗೆ ಮತ ನೀಡದಂತೆ ಮನವಿ ಮಾಡಿದ್ದಾರೆ. 
ಉತ್ತರ ಪ್ರದೇಶದ ರಾಜಧಾನಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿರುವ ಅರವಿಂದ್ ಕೇಜ್ರಿವಾಲ್, ಸಾರ್ವಜನಿಕರನ್ನು ಸರತಿ ಸಾಲಿನಲ್ಲಿ ನಿಲ್ಲುವಂತೆ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಾಠ ಕಲಿಸುವಂತೆ  ಕರೆ ನೀಡಿದ್ದಾರೆ. 
ನೀವು ನರೇಂದ್ರ ಮೋದಿ ಅವರನ್ನು ದೇಶದ ಪ್ರಧಾನಿಯನ್ನಾಗಿ ಮಾಡಿದಿರಿ ಆದರೆ ಪ್ರಧಾನಿ ನರೇಂದ್ರ ಮೋದಿ ನಿಮ್ಮ ಹಣವನ್ನು ಪಡೆಯುವುದಕ್ಕೆ ನೀವೇ ಸರತಿ ಸಾಲಿನಲ್ಲಿ ನಿಲ್ಲುವಂತೆ ಮಾಡಿದರು, ಒಂದು ವೇಳೆ ಉತ್ತರ ಪ್ರದೇಶದಲ್ಲಿ 73-80 ಸ್ಥಾನಗಳಷ್ಟೇ ಬಂದಿದ್ದರೆ ನರೇಂದ್ರ ಮೋದಿ ಪ್ರಧಾನಿಯಾಗುತ್ತಿರಲಿಲ್ಲ, ಈಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಾಠ ಕಲಿಸಲು ಸೂಕ್ತ ಸಮಯ ಬಂದಿದ್ದು ಉತ್ತರ ಪ್ರದೇಶದ ಜನತೆ ಪಾಠ ಕಲಿಸಬೇಕೆಂದು ಕೇಜ್ರಿವಾಲ್ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com