ಭಾರತೀಯ ಸೇನೆಯನ್ನು ರಾಜಕೀಯ ಹಸ್ತಕ್ಷೇಪಗಳಿಗೆ ಗುರಿ ಮಾಡುವುದು ಸರಿಯಲ್ಲ ಎಂದು ಸಿಪಿಐ(ಎಂ) ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ. ಭಾರತೀಯ ಸೇನೆಗೆ ಲೆ| ಜನರಲ್ ಬಿಪಿನ್ ರಾವತ್ ಅವರನ್ನು ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದ್ದು, ಅವರಿಗಿಂತ ಸೇವಾವಧಿಯಲ್ಲಿ ಹಿರಿಕರೆನಿಸಿರುವ ಲೆಫ್ಟಿನೆಂಟ್ ಜನರಲ್'ಗಳಿದ್ದರೂ ಬಿಪಿನ್ ರಾವತ್ ಅವರನ್ನು ಸೇನಾ ಮುಖ್ಯಸ್ಥರನ್ನಾಗಿ ನೇಮಕ ಮಾಡಿರುವ ಬಗ್ಗೆ ವಿಪಕ್ಷಗಳಿಂದ ಆಕ್ಷೇಪ ವ್ಯಕ್ತವಾಗಿದೆ.