ಕಿಡ್ನಿ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿ: ಆಸ್ಪತ್ರೆಯಿಂದ ಸುಷ್ಮಾ ಸ್ವರಾಜ್ ಬಿಡುಗಡೆ

ಅನಾರೋಗ್ಯಕ್ಕೀಡಾಗಿ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಇದೀಗ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಸೋಮವಾರ ಬಿಡುಗಡೆಗೊಂಡಿದ್ದಾರೆಂದು...
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್

ನವದೆಹಲಿ: ಅನಾರೋಗ್ಯಕ್ಕೀಡಾಗಿ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಇದೀಗ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಸೋಮವಾರ ಬಿಡುಗಡೆಗೊಂಡಿದ್ದಾರೆಂದು ತಿಳಿದುಬಂದಿದೆ.

ಸುಷ್ಮಾ ಅವರ ಆರೋಗ್ಯ ಕುರಿತಂತೆ ಆಸ್ಪತ್ರೆ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಸುಷ್ಮಾ ಸ್ವರಾಜ್ ಅವರು ವೇಗವಾಗಿ ಗುಣಮುಖರಾಗಿದ್ದು, ಇದೀಗ ಆಸ್ಪತ್ರೆಯಿಂದ ಬಿಡುಗಡೆಗೊಳ್ಳುತ್ತಿದ್ದಾರೆಂದು ಹೇಳಿದೆ.

ಆಸ್ಪತ್ರೆಗೆ ದಾಖಲಾಗಿದ್ದ ಸುಷ್ಮಾ ಅವರನ್ನು ಕಿಡ್ನಿ ಕಸಿ ತಂಡ, ಹಲವು ವಿಶೇಷ ವೈದ್ಯರು ಹಾಗೂ ವಿಶೇಷ ದಾದಿಯರು ನೋಡಿಕೊಳ್ಳುತ್ತಿದ್ದರೆಂದು ಏಮ್ಸ್ ಆಸ್ಪತ್ರೆಯ ವಕ್ತಾರ ಹೇಳದ್ದಾರೆ.

ಕಳೆದ 20 ವರ್ಷಗಳಿಂದಲೂ ಸುಷ್ಮಾ ಸ್ವರಾಜ್ ಅವರು ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರು. ನವೆಂಬರ್ 7 ರಂದು ಸುಷ್ಮಾ ಅವರು ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಸುಷ್ಮಾ ಅವರು ಕಿಡ್ನಿ ವೈಫಲ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆಂದು ವೈದ್ಯರು ತಿಳಿಸಿದ್ದರು. ನಂತರ ತುರ್ತು ನಿಗಾ ಘಟಕ್ಕೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇದಾದ ಕೆಲವೇ ದಿನಗಳಲ್ಲಿ ಸುಷ್ಮಾ ಅವರಿಗೆ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಯನ್ನು ನಡೆಸಲಾಗಿತ್ತು. ಇದೀಗ ಸುಷ್ಮಾ ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com