ದಕ್ಷಿಣ ಕೊರಿಯಾ ಅಧ್ಯಕ್ಷರ ದುರಾಡಳಿತದ ಬಗ್ಗೆ ವಿಶ್ವಸಂಸ್ಥೆ ಕಾರ್ಯದರ್ಶಿ ಟೀಕೆ

ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ದಕ್ಷಿಣ ಕೊರಿಯಾ ಅಧ್ಯಕ್ಷ ಪಾರ್ಕ್‌ ಜಿಯುನ್‌ ಹೈ ನಾಯಕತ್ವವನ್ನು ವಿಶ್ವಸಂಸ್ಥೆಯ ಕಾರ್ಯದರ್ಶಿ ಬಾನ್ ಕಿ-ಮೂನ್ ಟೀಕಿಸಿದ್ದಾರೆ.
ವಿಶ್ವಸಂಸ್ಥೆಯ ಕಾರ್ಯದರ್ಶಿ ಬಾನ್ ಕಿ-ಮೂನ್
ವಿಶ್ವಸಂಸ್ಥೆಯ ಕಾರ್ಯದರ್ಶಿ ಬಾನ್ ಕಿ-ಮೂನ್
ಸಿಯೋಲ್: ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ದಕ್ಷಿಣ ಕೊರಿಯಾ ಅಧ್ಯಕ್ಷ ಪಾರ್ಕ್‌ ಜಿಯುನ್‌ ಹೈ ನಾಯಕತ್ವವನ್ನು ವಿಶ್ವಸಂಸ್ಥೆಯ ಕಾರ್ಯದರ್ಶಿ ಬಾನ್ ಕಿ-ಮೂನ್ ಟೀಕಿಸಿದ್ದು ದಕ್ಷಿಣ ಕೊರಿಯಾದ ಕಳಪೆ ಆಡಳಿತದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. 
1950-53 ರಲ್ಲಿ ಕೊರಿಯಾ ಕದನವನ್ನು ಹೊರತುಪಡಿಸಿದರೆ ಕೊರಿಯಾ ಎಂದಿಗೂ ದಕ್ಷಿಣ ಕೊರಿಯಾದಲ್ಲಿ ಇಂತಹ ರಾಜಕೀಯ ಪ್ರಕ್ಷುಬ್ಧತೆ ಉಂಟಾಗಿರಲಿಲ್ಲ ಎಂದು ವಿಶ್ವಸಂಸ್ಥೆಯ ಕಾರ್ಯದರ್ಶಿ ಬಾನ್ ಕಿ-ಮೂನ್ ಅಭಿಪ್ರಾಯಪಟ್ಟಿದ್ದಾರೆ. ಕಳಪೆ ಆಡಳಿತದ ಬಗ್ಗೆ ದಕ್ಷಿಣ ಕೊರಿಯದ ಜನತೆ ಬೇಸತ್ತುಹೋಗಿದ್ದಾರೆ. ದಕ್ಷಿಣ ಕೊರಿಯಾದಲ್ಲಿ ಎಂದಿಗೂ ಇಂತಹ ಪರಿಸ್ಥಿತಿಯನ್ನು ನಿರೀಕ್ಷಿಸಿರಲಿಲ್ಲ ಎಂದು ಬಾನ್ ಕಿ-ಮೂನ್ ಹೇಳಿದ್ದಾರೆ. 
ದಕ್ಷಿಣ ಕೊರಿಯಾದ ಹಾಲಿ ಅಧ್ಯಕ್ಷರಾಗಿರುವ ಪಾರ್ಕ್‌ ಜಿಯುನ್‌ ಹೈ ಅವರ ತಂದೆ ಪಾರ್ಕ್ ಚುಂಗ್-ಹೀ ಅವರನ್ನು 1979 ರಲ್ಲಿ ಹತ್ಯೆ ಮಾಡಿದ ಬಳಿಕ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಆದರೆ ಈಗ ಶಾಂತಿಯುತವಾಗಿದ್ದ ದಕ್ಷಿಣ ಕೊರಿಯಾದಲ್ಲಿ ಅಂಥದ್ದೇ ಪರಿಸ್ಥಿತಿ ಉಂಟಾಗಿದೆ ಎಂದು ಬಾನ್ ಕಿ-ಮೂನ್ ಹೇಳಿದ್ದಾರೆ.
ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ದಕ್ಷಿಣ ಕೊರಿಯಾ ಅಧ್ಯಕ್ಷರಾದ ಪಾರ್ಕ್‌ ಜಿಯುನ್‌ ಹೈ ಅವರ ರಾಜೀನಾಮೆಗೆ ಆಗ್ರಹಿಸಿ ಒಂದೆರಡು ದಿನಗಳ ಹಿಂದೆ 5 ಲಕ್ಷಕ್ಕೂ ಹೆಚ್ಚು ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com