ಪಶ್ಚಿಮ ಬಂಗಾಳ: ರಾಷ್ಟ್ರಗೀತೆ ಹಾಡುವಾಗ ಮೊಬೈಲ್ ನಲ್ಲಿ ಮಾತನಾಡಿ ವಿವಾದ ಸೃಷ್ಟಿಸಿದ ವೈಶಾಲಿ ದಾಲ್ಮಿಯಾ

ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಮುಜುಗರವಾಗುವ ರೀತಿಯಲ್ಲಿ ಶಾಸಕಿ ವೈಶಾಲಿ ದಾಲ್ಮಿಯಾ...
ರಾಷ್ಟ್ರಗೀತೆ ಹಾಡುತ್ತಿರುವಾಗ ಮೊಬೈಲ್ ನಲ್ಲಿ ಮಾತನಾಡುತ್ತಿರುವ ಶಾಸಕಿ ವೈಶಾಲಿ ದಾಲ್ಮಿಯಾ
ರಾಷ್ಟ್ರಗೀತೆ ಹಾಡುತ್ತಿರುವಾಗ ಮೊಬೈಲ್ ನಲ್ಲಿ ಮಾತನಾಡುತ್ತಿರುವ ಶಾಸಕಿ ವೈಶಾಲಿ ದಾಲ್ಮಿಯಾ
ಹೌರಾ(ಪಶ್ಚಿಮ ಬಂಗಾಳ): ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಮುಜುಗರವಾಗುವ ರೀತಿಯಲ್ಲಿ ಶಾಸಕಿ ವೈಶಾಲಿ ದಾಲ್ಮಿಯಾ ನಡೆದುಕೊಂಡಿದ್ದು ರಾಷ್ಟ್ರಗೀತೆ ಹಾಡುವಾಗ ಅವರು ಫೋನ್ ನಲ್ಲಿ ಮಾತನಾಡುತ್ತಿದ್ದ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಹೌರಾದಲ್ಲಿ ಕ್ರೀಡಾ ಕಾರ್ಯಕ್ರಮವೊಂದರಲ್ಲಿ ನಿನ್ನೆ ಭಾಗವಹಿಸಿದ್ದ ವೇಳೆ ಇತರರು ರಾಷ್ಟ್ರಗೀತೆ ಹಾಡುತ್ತಿದ್ದಾಗ ಶಾಸಕರು ಯಾರಲ್ಲೋ ಮೊಬೈಲ್ ನಲ್ಲಿ ಮಾತನಾಡುವ ಬ್ಯುಸಿಯಲ್ಲಿದ್ದರು.
ಭಾರತೀಯ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಮಾಜಿ ಅಧ್ಯಕ್ಷ ಜಗಮೋಹನ್ ದಾಲ್ಮಿಯಾ ಅವರ ಪುತ್ರಿ ವೈಶಾಲಿ ದಾಲ್ಮಿಯಾ ನಿನ್ನೆ ಬೇಲೂರು ಪೊಲೀಸ್ ಸ್ಟೇಷನ್ ಆಯೋಜಿಸಿದ್ದ ಫುಟ್ ಬಾಲ್ ಪಂದ್ಯಾವಳಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ರಾಷ್ಟ್ರಗೀತೆ ಹಾಡುವ ಸಂದರ್ಭದಲ್ಲಿ ರಾಜಕೀಯ ವ್ಯಕ್ತಿಗಳು ಫೋನ್ ನಲ್ಲಿ ಮಾತನಾಡುತ್ತಾ ಸಿಕ್ಕಿಬೀಳುವುದು ಇದು ಮೊದಲ ಸಲವಲ್ಲ. ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫರೂಕ್ ಅಬ್ದುಲ್ಲಾ ಕೂಡ ಈ ಹಿಂದೆ ರಾಷ್ಟ್ರಗೀತೆ ಹಾಡುತ್ತಿದ್ದ ಸಂದರ್ಭದಲ್ಲಿ ಮೊಬೈಲ್ ನಲ್ಲಿ ಮಾತನಾಡಿದ್ದಕ್ಕೆ ತೀವ್ರ ಟೀಕೆ ಎದುರಿಸಬೇಕಾಗಿತ್ತು. 
ಈ ಮಧ್ಯೆ ಕೇರಳದಲ್ಲಿ ರಾಷ್ಟ್ರಗೀತೆಗೆ ಅಗೌರವ ತೋರಿಸಿದ್ದಕ್ಕಾಗಿ 6 ಮಂದಿಯನ್ನು ಬಂಧಿಸಲಾಗಿದೆ. ಇನ್ನೊಂದೆಡೆ ಕೇರಳದ ಲೇಖಕರು ಫೇಸ್ ಬುಕ್ ನಲ್ಲಿ ರಾಷ್ಟ್ರಗೀತೆಗೆ ದ್ರೋಹವೆಸಗಿದ್ದಾರೆ ಎಂದು ಆರೋಪ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com