ಮುಂಬೈ: ಏರ್ ಇಂಡಿಯಾ ಕಟ್ಟಡದಲ್ಲಿ ಅಗ್ನಿ ಅವಘಡ

ಏರ್ ಇಂಡಿಯಾ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕಟ್ಟಡದ ಸುತ್ತಲೂ ದಟ್ಟ ಹೊಗೆ ಆವರಿಸಿರುವುದಾಗಿ ಮಂಗಳವಾರ ತಿಳಿದುಬಂದಿದೆ...
ಏರ್ ಇಂಡಿಯಾ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿರುವ ಹಿನ್ನಲೆಯಲ್ಲಿ ಸ್ಥಳಕ್ಕೆ ದೌಡಾಯಿರುವ ಅಗ್ನಿಶಾಮಕ ದಳದ ಸಿಬ್ಬಂದಿಗಳು
ಏರ್ ಇಂಡಿಯಾ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿರುವ ಹಿನ್ನಲೆಯಲ್ಲಿ ಸ್ಥಳಕ್ಕೆ ದೌಡಾಯಿರುವ ಅಗ್ನಿಶಾಮಕ ದಳದ ಸಿಬ್ಬಂದಿಗಳು

ಮುಂಬೈ: ಏರ್ ಇಂಡಿಯಾ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕಟ್ಟಡದ ಸುತ್ತಲೂ ದಟ್ಟ ಹೊಗೆ ಆವರಿಸಿರುವುದಾಗಿ ಮಂಗಳವಾರ ತಿಳಿದುಬಂದಿದೆ.

ಮುಂಬೈನ ನಾರಿಮನ್ ಹೌಸ್ ಹತ್ತಿರವಿರುವ ಏರ್ ಇಂಡಿಯಾ ಕಟ್ಟಡದ 22ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವುದಾಗಿ ತಿಳಿದುಬಂದಿದ್ದು, 4 ಅಗ್ನಿ ಶಾಮಕ ದಳದ ವಾಹನಗಳೊಂದಿಗೆ ಸ್ಥಳಕ್ಕಾಗಮಿಸಿರುವ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯವನ್ನು ನಡೆಸುತ್ತಿದ್ದಾರೆ.

ಬೆಂಕಿ ಅವಘಡಕ್ಕೆ ಯಾವುದೇ ಕಾರಣಗಳು ತಿಳಿದುಬಂದಿಲ್ಲ. ಪ್ರಸ್ತುತ ಸ್ಥಳಕ್ಕಾಗಮಿಸಿರುವ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com