ತಮಿಳುನಾಡು ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ರಾಮ ಮೋಹನ್ ರಾವ್ ಗೆ ಖೊಕ್

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ಮರುದಿನವೇ ತಮಿಳುನಾಡು ಸರ್ಕಾರ ಮುಖ್ಯ...
ಹಿಂದಿನ ಮುಖ್ಯ ಕಾರ್ಯದರ್ಶಿ ಪಿ.ರಾಮ ಮೋಹನ್ ರಾವ್ ಮತ್ತು ನೂತನ ಮುಖ್ಯ ಕಾರ್ಯದರ್ಶಿ ಗಿರಿಜಾ ವೈದ್ಯನಾಥನ್
ಹಿಂದಿನ ಮುಖ್ಯ ಕಾರ್ಯದರ್ಶಿ ಪಿ.ರಾಮ ಮೋಹನ್ ರಾವ್ ಮತ್ತು ನೂತನ ಮುಖ್ಯ ಕಾರ್ಯದರ್ಶಿ ಗಿರಿಜಾ ವೈದ್ಯನಾಥನ್
Updated on: 
ಚೆನ್ನೈ: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ಮರುದಿನವೇ ತಮಿಳುನಾಡು ಸರ್ಕಾರ ಮುಖ್ಯ ಕಾರ್ಯದರ್ಶಿ ಪಿ.ರಾಮ ಮೋಹನ್ ರಾವ್ ಅವರನ್ನು ಹುದ್ದೆಯಿಂದ ತೆಗೆದುಹಾಕಿದೆ.
ಅವರ ಸ್ಥಾನಕ್ಕೆ ಹಿರಿಯ ಐಎಎಸ್ ಅಧಿಕಾರಿ ಗಿರಿಜಾ ವೈದ್ಯನಾಥನ್ ಅವರನ್ನು ನೇಮಿಸಲಾಗಿದೆ. 
ರಾವ್ ಅವರನ್ನು ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ತೆಗೆದುಹಾಕಿದರೂ ಕೂಡ ತಮಿಳುನಾಡು ಸರ್ಕಾರದ ಆಡಳಿತದಲ್ಲಿ ಪ್ರಭಾವಿ ವ್ಯಕ್ತಿಯಾಗಿರುವ ರಾಮ್ ಮೋಹನ್ ರಾವ್ ಅವರನ್ನು ಅಮಾನತಿನಲ್ಲಿಟ್ಟಿಲ್ಲ. ನಿನ್ನೆ ಅವರ ಕಚೇರಿ ಮತ್ತು ನಿವಾಸದ ಮೇಲೆ ದಾಳಿ ನಡೆಸಿದ ನಂತರ ಅವರನ್ನು ಹುದ್ದೆಯಿಂದ ಅಮಾನತು ಮಾಡಬಹುದು ಎಂದು ಊಹಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com