ಇಸಿಸ್ ಬೆದರಿಕೆ: ಭಾರತದಲ್ಲಿರುವ ತನ್ನ ಪ್ರಜೆಗಳಿಗೆ ಅಮೆರಿಕ ಎಚ್ಚರಿಕೆ

ಭಾರತದಲ್ಲಿ ಸರಣಿ ದಾಳಿ ನಡೆಸಲು ಇಸಿಸ್ ಉಗ್ರರು ಯೋಜನೆ ರೂಪಿಸುತ್ತಿರುವ ಹಿನ್ನೆಲೆಯಲ್ಲಿ ಭಾರತದಲ್ಲಿರುವ ತನ್ನ ಪ್ರಜೆಗಳು ಕಟ್ಟೆಚ್ಚರದಿಂದ ಇರುವಂತೆ ಅಮೆರಿಕ ರಾಜಭಾರ ಕಚೇರಿ ಮಂಗಳವಾ ಸಂದೇಶ ರವಾನಿಸಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಭಾರತದಲ್ಲಿ ಸರಣಿ ದಾಳಿ ನಡೆಸಲು ಇಸಿಸ್ ಉಗ್ರರು ಯೋಜನೆ ರೂಪಿಸುತ್ತಿರುವ ಹಿನ್ನೆಲೆಯಲ್ಲಿ ಭಾರತದಲ್ಲಿರುವ ತನ್ನ ಪ್ರಜೆಗಳು ಕಟ್ಟೆಚ್ಚರದಿಂದ ಇರುವಂತೆ ಅಮೆರಿಕ ರಾಜಭಾರ ಕಚೇರಿ ಮಂಗಳವಾ ಸಂದೇಶ ರವಾನಿಸಿದೆ.

ಭಾರತದಲ್ಲಿರುವ ಎಲ್ಲ ಅಮೆರಿಕ ಪ್ರಜೆಗಳಿಗೆ ಅಮೆರಿಕ ರಾಯಭಾರ ಕಚೇರಿಯಿಂದ ನಿನ್ನೆ ತುರ್ತು ಸಂದೇಶವೊಂದು ರವಾನೆಯಾಗಿದ್ದು, ವಿದೇಶಿಗರಿರುವ ಸ್ಥಳಗಳು, ಧಾರ್ಮಿಕ ಪ್ರದೇಶಗಳು, ಮಾರುಕಟ್ಟೆ ಹಾಗೂ ಇನ್ನಿತರೆ ಜನನಿ ಬಿಡ ಪ್ರದೇಶಗಳ ಮೇಲೆ ಉಗ್ರರು ದಾಳಿ ನಡೆಸುವ ಸಾಧ್ಯತೆಗಳಿದ್ದು, ತೀವ್ರ ಕಟ್ಟೆಚ್ಚರದಿಂದ ಇರುವಂತೆ ಭಾರತದಲ್ಲಿರುವ ತಿಳಿಸಿದೆ.

ಈ ಕುರಿತಂತೆ ಮಾತನಾಡಿರುವ ಅಮೆರಿಕ ರಾಯಭಾರಿ ಕಚೇರಿಯ ಭದ್ರತಾ ಸಲಹೆಗಾರ, ಭಾರತದಲ್ಲಿ ಇಸಿಸ್ ಉಗ್ರರು ಸರಣಿ ದಾಳಿ ನಡೆಸಲು ಯೋಜನೆ ರೂಪಿಸಿದೆ ಎಂದು ಮಾಧ್ಯಮಗಳು ವರದಿ ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ಭಾರತದಲ್ಲಿರುವ ಅಮೆರಿಕರನ್ನು ತೀವ್ರ ಕಟ್ಟೆಚ್ಚರದಿಂದ ಇರುವಂತೆ ಈ ಮೂಲಕ ಸಂದೇಶ ರವಾನಿಸುತ್ತಿದ್ದೇವೆಂದು ಹೇಳಿದ್ದಾರೆ.

ಮುಂಬರುವ ದಿನಗಳಲ್ಲಿ ಭಾರತದಲ್ಲಿ ಸರಣಿ ದಾಳಿಗಳನ್ನು ನಡೆಸಲು ಉಗ್ರರು ಯೋಜನೆ ರೂಪಿಸಿದ್ದು, ಈಗಾಗಲೇ ಗಡಿನಿಯಂತ್ರಣ ರೇಖೆ ಬಳಿಯಿರುವ ಪಾಕಿಸ್ತಾನದ ಲಾಂಚ್ ಪ್ಯಾಡ್ ಗಳಲ್ಲಿ ಸಿದ್ಧರಾಗಿ ಕುಳಿತಿದಿದ್ದಾರೆಂದು ಗುಪ್ತಚರ ಇಲಾಖೆ ಅಧಿಕಾರಿಗಳಿಗೆ ನಿನ್ನೆಯಷ್ಟೇ ಎಚ್ಚರಿಕೆ ನೀಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com