ಅಲ್ಮೋರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿರುವ ರಾಹುಲ್ ಗಾಂಧಿ, ನೋಟು ನಿಷೇಧದ ನಂತರ ಕಪ್ಪುಹಣ ಹೊಂದಿರುವ ಒಬ್ಬನನ್ನೂ ಸಹ ಬಂಧಿಸಲಾಗಿಲ್ಲ. 50 ಕುಟುಂಬಗಳು ಬ್ಯಾಂಕ್ ನಿಂದ ತೆಗೆದುಕೊಂಡಿರುವ ಸಾಲವನ್ನು ಮನ್ನಾ ಮಾಡಲು ಈ ಯೋಜನೆ ಜಾರಿಗೆ ತರಲಾಗಿದೆ ಎಂದು ರಾಹುಲ್ ಗಾಂಧಿ ಪ್ರಧಾನಿ ವಿರುದ್ಧ ಆರೋಪ ಮಾಡಿದ್ದು, ಸ್ವಿಸ್ ಬ್ಯಾಂಕ್ ನಲ್ಲಿ ಹಣ ಇಟ್ಟಿರುವವರ ಹೆಸರನ್ನು ಕೇಂದ್ರ ಸರ್ಕಾರ ಸಂಸತ್ ನಲ್ಲಿ ಬಿಡುಗಡೆ ಮಾಡಬೇಕು ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.