ನೋಟು ನಿಷೇಧ ಕಪ್ಪುಹಣದ ವಿರುದ್ಧ ಯುದ್ಧವಲ್ಲ, ಆರ್ಥಿಕ ದರೋಡೆ: ರಾಹುಲ್ ಗಾಂಧಿ

ನೋಟು ನಿಷೇಧದ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿಯ ಸರಣಿಯನ್ನು ಮುಂದುವರೆಸಿರುವ ರಾಹುಲ್ ಗಾಂಧಿ, ನೋಟು ನಿಷೇಧವನ್ನು ಆರ್ಥಿಕ ದರೋಡೆ ಎಂದಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ
Updated on: 
ಅಲ್ಮೋರಾ: ನೋಟು ನಿಷೇಧದ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿಯ ಸರಣಿಯನ್ನು ಮುಂದುವರೆಸಿರುವ ರಾಹುಲ್ ಗಾಂಧಿ, ನೋಟು ನಿಷೇಧವನ್ನು ಆರ್ಥಿಕ ದರೋಡೆ ಎಂದಿದ್ದಾರೆ. 
ಉತ್ತರಾಖಂಡ್ ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿರುವ ರಾಹುಲ್ ಗಾಂಧಿ, ನೋಟು ನಿಷೇಧ ಕಪ್ಪುಹಣದ ವಿರುದ್ಧದ ಯುದ್ಧವಲ್ಲ, ಬದಲಾಗಿ ಆರ್ಥಿಕ ಲೂಟಿ ಎಂದು ಲೇವಡಿ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಬಯಸುತ್ತದೆ.  ಒಂದು ವೇಳೆ ನರೇಂದ್ರ ಮೋದಿ ಅವರು ಈ ನಿಟ್ಟಿನಲ್ಲಿ ಕ್ರಮ ಕೈಂಡರೆ ಕಾಂಗ್ರೆಸ್ ಬೆಂಬಲ ನೀಡುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. 
ಕೇಂದ್ರ ಸರ್ಕಾರ ಪ್ರಸ್ತುತ ಕೈಗೊಂಡಿರುವ ಕ್ರಮ ಭ್ರಷ್ಟಾಚಾರದ ವಿರುದ್ಧ ಅಲ್ಲ, ಬಡವರ ವಿರುದ್ಧ ಯುದ್ಧ ಸಾರಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಕಪ್ಪುಹಣ ಹೊಂದಿರುವವರ ಬಗ್ಗೆ ಸ್ವಿಸ್ ಸರ್ಕಾರ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ಈಗಾಗಲೇ ಮಾಹಿತಿ ನೀಡಿದೆ, ಸ್ವಿಸ್ ಸರ್ಕಾರದಿಂದ ಸಿಕ್ಕಿರುವ ಮಾಹಿತಿಯನ್ನು ಏಕೆ ರಾಜ್ಯಸಭೆ, ಲೋಕಸಭೆಯಲ್ಲಿ ಬಹಿರಂಗಪಡಿಸುತ್ತಿಲ್ಲ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. 
ಬಡವರು ಕಷ್ಟಪಟ್ಟು ಸಂಪಾದಿಸಿರುವ ಹಣವನ್ನು ನರೇಂದ್ರ ಮೋದಿ ಕಿತ್ತುಕೊಳ್ಳುತ್ತಿದ್ದಾರೆ. ಮತ್ತೊಂದೆಡೆ ವಿಜಯ್ ಮಲ್ಯಾ ಅವರಂತಹ ಉದ್ಯಮಿಗಳ ಸಾಲವನ್ನು ಮನ್ನಾ ಮಾಡುತ್ತಿದ್ದಾರೆ, ನೋಟು ನಿಷೇಧವನ್ನು ಶ್ರೀಮಂತರ ಸಾಲವ ಮನ್ನಾ ಮಾಡಲು ಜಾರಿಗೆ ತರಲಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com