ಮುಂಬೈ: ಶಿವಾಜಿ ಪ್ರತಿಮೆ, ಸ್ಮಾರಕಕ್ಕೆ ಪ್ರಧಾನಿ ಮೋದಿ ಭೂಮಿಪೂಜೆ

ಮುಂಬೈನಲ್ಲಿ ಅಂದಾಜು 3600 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಛತ್ರಪತಿ ಶಿವಾಜಿ ಪ್ರತಿಮೆ ಹಾಗೂ ಸ್ಮಾರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ...
ಮುಂಬೈಗೆ ಭೇಟಿ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ
ಮುಂಬೈಗೆ ಭೇಟಿ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ

ಮುಂಬೈ: ಮುಂಬೈನಲ್ಲಿ ಅಂದಾಜು 3600 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಛತ್ರಪತಿ ಶಿವಾಜಿ ಪ್ರತಿಮೆ ಹಾಗೂ ಸ್ಮಾರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಭೂಮಿಪೂಜೆ ನೆರವೇರಿಸಲಿದ್ದಾರೆ.

ಮುಂಬೈಗೆ ನೀಡಿರುವ ಪ್ರಧಾನಿ ಮೋದಿಯವರು ಇಲ್ಲಿನ ಮೆಟ್ರೋ ರೈಲು ಯೋಜನೆಗೆ ಚಾಲನೆ ನೀಡಲಿದ್ದಾರೆ. ನಂತರ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ನಂತರ ಪುಣೆಗೆ ಭೇಟಿ ನೀಡಲಿರುವ ಅವರು, ಪುಣೆ ಮೆಟ್ರೋ ರೈಲು ಯೋಜನೆಗೆ ಚಾಲನೆ ನೀಡಲಿದ್ದಾರೆ. ಹಾಗೂ ಜನತೆಯನ್ನುದ್ದೇಶಿಸಿ ಭಾಷಣೆ ಮಾಡಲಿದ್ದಾರೆ.

ಮಹಾರಾಷ್ಟ್ರದಲ್ಲಿ ಮರಾಠರ ಮನವೊಲಿಕೆ ಮಾಡಲು ಮುಂದಾಗಿರುವ ಬಿಜೆಪಿ ಸರ್ಕಾರ ಹಿಂದೂ ಮಹಾಸಾಗರದಲ್ಲಿ ಛತ್ರಪತಿ ಶಿವಾಜಿಯ ಸ್ಮಾರಕ ನಿರ್ಮಿಸಲು ರು.3,600 ಕೋಟಿ ಗಳ ಯೋಜನೆಯನ್ನು ಕೈಗೆತ್ತಿಕೊಂಡಿದೆ.

ಮೀಸಲಾತಿಗೆ ಆಗ್ರಹಿಸಿ ಮರಾಠ ಸಮುದಾಯದವರು ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಮರಾಠರನ್ನು ಸಮಾಧಾನ ಮಾಡುವ ಪ್ರಯತ್ನಗಳನ್ನು ನಡೆಸುತ್ತಿದೆ. ಇದರ ಭಾಗವಾಗಿಯೇ ಇದೀಗ ಶಿವಾಜಿ ಸ್ಮಾರಕ ನಿರ್ಮಾಣದ ಭಾರಿ ಯೋಜನೆಗೆ ಪ್ರಧಾನಿ ಮೋದಿಯವರು ಭೂಮಿ ಪೂಜೆ ನೆರವೇರಿಸಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com