ಸದ್ಯ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವ ಚಿಂತನೆ ಇಲ್ಲ: ನಖ್ವಿ

ಸದ್ಯ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವ ಯಾವುದೇ ಚಿಂತನೆ ಸರ್ಕಾರದ ಮುಂದೆ ಇಲ್ಲ ಎಂದು ಕೇಂದ್ರ ಅಲ್ಪ...
ಮುಖ್ತಾರ್ ಅಬ್ಬಾಸ್ ನಖ್ವಿ
ಮುಖ್ತಾರ್ ಅಬ್ಬಾಸ್ ನಖ್ವಿ
Updated on: 
ತ್ರಿಸೂರ್: ಸದ್ಯ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವ ಯಾವುದೇ ಚಿಂತನೆ ಸರ್ಕಾರದ ಮುಂದೆ ಇಲ್ಲ ಎಂದು ಕೇಂದ್ರ ಅಲ್ಪ ಸಂಖ್ಯಾತ ವ್ಯವಹಾರಗಳ ಖಾತೆ ರಾಜ್ಯ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಮಂಗಳವಾರ ಸ್ಪಷ್ಟಪಡಿಸಿದ್ದಾರೆ.
ಇಂದು ವರದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ನಖ್ವಿ, ಈ ಸರ್ಕಾರದ ಮಟ್ಟದಲ್ಲಿ ಯಾವುದೇ ಚರ್ಚೆ, ನಿರ್ಧಾರ, ಅಥವಾ ಚಿಂತನೆ ಇಲ್ಲ ಎಂದು ಹೇಳಿದರು. ಅಲ್ಲದೆ ಒಂದು ವೇಳೆ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ಮುಂದಾದರೆ, ಸರ್ಕಾರ ಸಂಬಂಧಪಟ್ಟವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಿದೆ ಎಂದರು.
ದುರ್ಬಲ ವರ್ಗದವರಿಗೆ ಶಿಕ್ಷಣ ಮತ್ತು ಉದ್ಯೋಗ ಅವಕಾಶ ಕಲ್ಪಿಸಲು ಸರ್ಕಾರ ಯತ್ನಿಸುತ್ತಿದೆ. ಆದರೆ ಕೆಲವು ವರ್ಗದ ಜನ ಸರ್ಕಾರದ ವಿವಿಧ ಕಾರ್ಯಕ್ರಮಗಳಲ್ಲಿ ಲೂಟಿ ಮಾಡುತ್ತಿದ್ದಾರೆ ಎಂಬ ವರದಿಗಳಿವೆ ಎಂದರು.
ನಿಜವಾದ ದುರ್ಬಲಿಗೆ ಸರ್ಕಾರದ ಸೌಲಭ್ಯಗಳು ದೊರೆಯುತ್ತಿಲ್ಲ. ದುರ್ಬಲರ ಹೆಸರಿನಲ್ಲಿ ಕೆಲವರು ಲೂಟಿ ಮಾಡುತ್ತಿದ್ದಾರೆ ಎಂದು ಸಚಿವರು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com