2017 ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ವೇಳಾಪಟ್ಟಿ ಡಿ.30 ರಂದು ಬಿಡುಗಡೆ ಸಾಧ್ಯತೆ
2017 ರಲ್ಲಿ ನಡೆಯಲಿರುವ ಉತ್ತರ ಪ್ರದೇಶ, ಉತ್ತರಾಖಂಡ್, ಪಂಜಾಬ್, ಮಣಿಪುರ, ಗೋವಾ ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಡಿ.30 ರಂದು ಬಿಡುಗಡೆ ಮಾಡುವ ಸಾಧ್ಯತೆ ಇದೆ.
ನವದೆಹಲಿ: 2017 ರಲ್ಲಿ ನಡೆಯಲಿರುವ ಉತ್ತರ ಪ್ರದೇಶ, ಉತ್ತರಾಖಂಡ್, ಪಂಜಾಬ್, ಮಣಿಪುರ, ಗೋವಾ ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಡಿ.30 ರಂದು ಬಿಡುಗಡೆ ಮಾಡುವ ಸಾಧ್ಯತೆ ಇದೆ.
ಚುನಾವಣಾ ವೇಳಾಪಟ್ಟಿಗೆ ಸಂಬಂಧಿಸಿದಂತೆ ಡಿ.30 ರಂದು ಕೇಂದ್ರ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಲಿದ್ದು, ಅಂದೇ ವೇಳಾಪಟ್ಟಿ ಘೋಷಣೆಯಾಗುವ ನಿರೀಕ್ಷೆ ಇದೆ. ಉತ್ತರ ಪ್ರದೇಶ ರಾಜ್ಯದ ಚುನಾವಣೆಯನ್ನು 7
ಹಂತಗಳಲ್ಲಿ ನಡೆಸಲು ಚುನಾವಣಾ ಆಯೋಗ ಉದ್ದೇಶಿಸಿದ್ದು ಉಳಿದ 4 ರಾಜ್ಯಗಳ ಚುನಾವಣೆ ಒಂದೇ ಹಂತದಲ್ಲಿ ನಡೆಸುವ ಸಾಧ್ಯತೆ ಇದೆ. ಬೋರ್ಡ್ ಪರೀಕ್ಷೆಗಳಿಗೂ ಮುನ್ನ ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ಪಶ್ಚಿಮ ಉತ್ತರ ಪ್ರದೇಶದಿಂದ ಮೊದಲ ಹಂತದ ಚುನಾವಣೆ ಪ್ರಾರಂಭವಾಗಲಿದೆ ಎಂದು ಹೇಳಲಾಗುತ್ತಿದೆ.
ಪಂಜಾಬ್, ಗೋವಾ, ಮಣಿಪುರ ವಿಧಾನಸಭೆಗಳ ಅವಧಿ ಮಾರ್ಚ್ 18 ರ ವರೆಗೆ ಇದ್ದರೆ, ಉತ್ತರಾಖಂಡ್ ವಿಧಾನಸಭೆಯ ಅವಧಿ ಮಾ.26 ರ ವರೆಗೆ ಇದೆ. ವೇಳಾಪಟ್ಟಿ ಘೋಷಣೆಗೂ ಮುನ್ನ ಡಿ.27 ರಂದು ಕೇಂದ್ರ ಚುನಾವಣಾ ಆಯೋಗ ಭದ್ರತಾ ವ್ಯವಸ್ಥೆ ಬಗ್ಗೆ ಸಭೆ ನಡೆಸಿದೆ.