ಕೇರಳ ಬಸ್ ಅಪಘಾತ: 39 ವಿದ್ಯಾರ್ಥಿಗಳಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ
ಕೋಝಿಕೋಡ್: ಅಧ್ಯಯನ ಭೇಟಿಗಾಗಿ ಮೈಸೂರಿಗೆ ಆಗಮಿಸಿದ್ದ ಕೇರಳ ಬಸ್ ವೊಂದು ಅಪಘಾತಕ್ಕೀಡಾಗಿದ್ದು, ಶಿಕ್ಷಕರು ಸೇರಿದಂತೆ 39 ವಿದ್ಯಾರ್ಥಿಗಳು ಗಾಯವಾಗಿರುವ ಘಟನೆ ಕೊಡುವಿಲ್ಲೆಯ ಪದನಿಲಂ ಪ್ರದೇಶದಲ್ಲಿ ಮಂಗಳವಾರ ನಡೆದಿದೆ.
ತಿರುವನಂತಪುರಂನ ಅಟ್ಟಿಂಗಲ್ ಸರ್ಕಾರಿ ಕಾಲೇಜಿಗೆ ವಿದ್ಯಾರ್ಥಿಗಳು ನಿನ್ನೆ ಅಧ್ಯಯನ ಭೇಟಿಗೆಂದು ಮೈಸೂರಿಗೆ ಭೇಟಿ ನೀಡಿತ್ತು. ಭೇಟಿ ಬಳಿಕ ಹಿಂತಿರುಗಿ ಕೇರಳ ರಾಜ್ಯಕ್ಕೆ ಹೋಗುವ ವೇಳೆ ಬಸ್ ಅಪಘಾತಕ್ಕೀಡಾಗಿದೆ ಎಂದು ತಿಳಿದುಬಂದಿದೆ.
ಬಸ್ಸಿನಲ್ಲಿ ಒಟ್ಟು 40 ವಿದ್ಯಾರ್ಥಿಗಳಿದ್ದರು. ಅಪಘಾತದಲ್ಲಿ 39 ವಿದ್ಯಾರ್ಥಿಗಳು ಗಾಯಗೊಂಡಿದ್ದು, 18 ವಿದ್ಯಾರ್ಥಿಗಳನ್ನು ಕೋಝಿಕೋಡ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ಇಬ್ಬರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಇನ್ನುಳಿದ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವೇಗವಾಗಿ ಬರುತ್ತಿದ್ದ ಕಾರಣ ಇಲ್ಲವೇ ಚಾಲಕ ನಿದ್ರೆಗೆ ಜಾರಿದ್ದರಿಂದಾಗಿ ಘಟನೆ ಸಂಭವಿಸಿರಬಹುದು. ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಗೊಂಡಿದ್ದ ವಿದ್ಯಾರ್ಥಿಗಳನ್ನು ಹೊರಗೆ ಕರೆತರಲಾಗಿತ್ತು. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ