ದೆಹಲಿ ನೂತನ ಲೆ.ಗವರ್ನರ್ ಹುದ್ದೆಗೆ ಅನಿಲ್ ಬೈಜಲ್ ಹೆಸರು ಶಿಫಾರಸು

ನಜೀಬ್ ಜಂಗ್ ಅವರು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ನೀಡಿದ್ದ ರಾಜಿನಾಮೆಯನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಬುಧವಾರ...
ಅನಿಲ್ ಬೈಜಾಲ್
ಅನಿಲ್ ಬೈಜಾಲ್
ನವದೆಹಲಿ: ನಜೀಬ್ ಜಂಗ್ ಅವರು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ನೀಡಿದ್ದ ರಾಜಿನಾಮೆಯನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಬುಧವಾರ ಅಂಗೀಕರಿಸಿದ್ದು, ನಿವೃತ್ತ ಐಎಎಸ್ ಅಧಿಕಾರಿ, ಮಾಜಿ ಕೇಂದ್ರ ಗೃಹ ಕಾರ್ಯದರ್ಶಿ ಅನಿಲ್ ಬೈಜಲ್ ಅವರು ನೂತನ ಲೆಫ್ಟಿನೆಂಟ್ ಗವರ್ನರ್ ಆಗುವ ಸಾಧ್ಯತೆ ಇದೆ.
ಕೇಂದ್ರ ಸರ್ಕಾರ ದೆಹಲಿ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ಅನಿಲ್ ಬೈಜಲ್ ಅವರ ಹೆಸರನ್ನು ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ. ನಜೀಬ್ ಜಂಗ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡುವ ಅಚ್ಚರಿಯ ನಿರ್ಧಾರ ಪ್ರಕಟಿಸಿದ ಐದು ದಿನಗಳ ಬಳಿಕ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ.
1969ನೇ ಬ್ಯಾಚ್ ಐಎಎಸ್ ಅಧಿಕಾರಿಯಾಗಿರುವ ಬೈಜಲ್ ಅವರು 2006ರಲ್ಲಿ ಸೇವೆಯಿಂದ ನಿವೃತ್ತಿಯಾಗಿದ್ದು, ವಾಜಪೇಯಿ ಸರ್ಕಾರದಲ್ಲಿ ಗೃಹ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ. 2004ರ ಮೇ ತಿಂಗಳಲ್ಲಿ ಯುಪಿಎ ಅಧಿಕಾರಕ್ಕೆ ಬಂದಾಗ ಕೇಂದ್ರ ಗೃಹ ಇಲಾಖಾ ಕಾರ್ಯದರ್ಶಿ ಹುದ್ದೆಯಿಂದ ಅವರನ್ನು ಕಿತ್ತು ಹಾಕಲಾಗಿತ್ತು.
ರಾಜೀನಾಮೆ ನೀಡಿರುವ ಜಂಗ್ ಅವರು ದೆಹಲಿ ಸರ್ಕಾರ ಮತ್ತು ದೆಹಲಿ ಮುಖ್ಯಮಂತ್ರಿ ಜೊತೆಗಿನ ತಿಕ್ಕಾಟಗಳಿಂದಾಗಿ ನಿರಂತರ ಸುದ್ದಿಯಲ್ಲಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com