ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಸುಂದರ್ ಲಾಲ್ ಪಟ್ವಾ ನಿಧನ

ಮಧ್ಯಪ್ರದೇಶದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಬಿಜೆಪಿ ಹಿರಿಯ ನಾಯಕ ಸುಂದರ್ ಲಾಲ್ ಪಟ್ವಾ (92) ಅವರು ಹೃದಯಾಘಾತದಿಂದ ಬುಧವಾರ ನಿಧನರಾಗಿದ್ದಾರೆ...
ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಸುಂದರ್ ಲಾಲ್ ಪಟ್ವಾ
ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಸುಂದರ್ ಲಾಲ್ ಪಟ್ವಾ
Updated on: 

ಭೋಪಾಲ್: ಮಧ್ಯಪ್ರದೇಶದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಬಿಜೆಪಿ ಹಿರಿಯ ನಾಯಕ ಸುಂದರ್ ಲಾಲ್ ಪಟ್ವಾ (92) ಅವರು ಹೃದಯಾಘಾತದಿಂದ ಬುಧವಾರ ನಿಧನರಾಗಿದ್ದಾರೆ.

ಅನಾರೋಗ್ಯದಿಂದಾಗಿ ಕೆಲದಿನಗಳ ಹಿಂದಷ್ಟೇ ಪಟ್ವಾ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಸುದಲ್ ಲಾಲ್ ಪಟ್ವಾ ಅವರು ಜನಸಂಘದ ಮೂಲಕ ರಾಜಕೀಯಕ್ಕೆ ಪ್ರವೇಶ ಮಾಡಿದ್ದರು. 1924ರ ನವೆಂಬರ್ 11ರಂದು ಕುಕಡೇಶ್ವರದಲ್ಲಿ ಜನಿಸಿದ್ದ ಪಟ್ವಾ ಅವರು, ಬಿಜೆಪಿಯಿಂದ 2 ಬಾರಿ ಮಧ್ಯಪ್ರದೇಶ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.

ಪಟ್ವಾ ಅವರ ನಿಧನ ಹಿನ್ನಲೆಯಲ್ಲಿ ಮಧ್ಯಪ್ರದೇಶ ಸರ್ಕಾರ ರಾಜ್ಯದಲ್ಲಿ ಮೂರು ದಿನಗಳ ಶೋಕಾಚರಣೆಯನ್ನು ಘೋಷಣೆ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com